September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಫೆ.7ರಂದು ಜರಗಿತು.

NRLM ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ಶಿರ್ಲಾಲು ಹಾಗೂ ಕರಂಬಾರು ಶಾಲಾ ಮಕ್ಕಳಿಂದ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಸ್ವಾಗತವನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಡಾ. ಬಿ. ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಹಾಗೂ ಪ್ರತಿಮೆಗೆ ಹಾರಾರ್ಪಣೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂವಿಧಾನ ಪೀಠಿಕೆಯನ್ನು ಬೋಧನೆ ಮಾಡಲಾಯಿತು. ಸಂವಿಧಾನ ಜಾಗೃತಿ ಕುರಿತು ಶಿರ್ಲಾಲು ಹಾಗೂ ಕರಂಬಾರು ಶಾಲಾ ಮಕ್ಕಳು ಜಾಥಾ ಕಾರ್ಯಕ್ರಮದಲ್ಲಿ ಘೋಷವಾಕ್ಯಗಳನ್ನು ಕೂಗಿದರು. ಸಂವಿಧಾನ ಜಾಗೃತಿ ರಥವು ಕರಂಬಾರು ಗ್ರಾಮದ ಶಾಂತಿನಗರದಿಂದ ಹೊರಟು ಗ್ರಾಮ ಪಂಚಾಯತ್ ವಠಾರಕ್ಕೆ ಮೆರವಣಿಗೆಯ ಮೂಲಕ ಸಂಚರಿಸಿತು. ಸಂವಿಧಾನ ಜಾಗೃತಿ ಜಾಥಾ ಜೊತೆ ಬಂದ ಮಂಗಳೂರು ಕಲಾ ತಂಡದವರಿಂದ ಸಂವಿಧಾನ ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಛೇರಿಯ ಮ್ಯಾನೇಜರ್ ಮತ್ತು ಇತರ ಅಧಿಕಾರಿ ವರ್ಗದವರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಮಾಜಿ ಅಧ್ಯಕ್ಷರುಗಳು, ಶಿರ್ಲಾಲು ಹಾಗೂ ಕರಂಬಾರು ಶಾಲಾ ಶಿಕ್ಷಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ಡೀನ್ ಗೀತಾ ಬಿ. ಶೆಟ್ಟಿಯವರಿಗೆ ಪಿಎಚ್.ಡಿ

Suddi Udaya

ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಶಿಶಿಲ ಹೇವಾಜೆ ನಿವಾಸಿ ತನಿಯಪ್ಪ ಮುಗೇರ ನಿಧನ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್ : ಉಜಿರೆಯ ಎಸ್.ಡಿ.ಎಂ ಗೆ ಅವಳಿ ಪ್ರಶಸ್ತಿ

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ದಯಾ ವಿಶೇಷ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya
error: Content is protected !!