24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನಿರ್ಗಮಿತ ವ್ಯವಸ್ಥಾಪನ ಸಮಿತಿಯು ಕಳೆದ ಮೂರು ವರ್ಷದ ಅವಧಿಯಲ್ಲಿ ಕ್ಷೇತ್ರದ ಎಲ್ಲಾ ಅರ್ಚಕರು ಮತ್ತು ಸಿಬ್ಬಂದಿಗಳನ್ನು ಅತ್ಯಂತ ಪ್ರೀತಿಯಿಂದ ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಕ್ಷೇತ್ರದ ಕೆಲವೊಂದು ವ್ಯವಸ್ಥೆಗಳನ್ನು ಸರಿಪಡಿಸುವ ದೃಷ್ಟಿಯಲ್ಲಿ ಕೈಗೊಂಡ ನಿರ್ಧಾರಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳನ್ನು ಫೆ.06 ರಂದು ಕ್ಷೇತ್ರದ ಕಚೇರಿಯಲ್ಲಿ ವೈಯಕ್ತಿಕವಾಗಿ ಪ್ರತಿಯೊಬ್ಬರಿಗೂ ವ್ಯವಸ್ಥಾಪನ ಸಮಿತಿಯ ವತಿಯಿಂದ ಶಾಲು ಹೊದಿಸಿ ಸಿಹಿ ತಿಂಡಿ ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಕ್ಷೇತ್ರದ ಎಲ್ಲಾ ಸಿಬ್ಬಂದಿಗಳು ಹಾಗೂ ಅರ್ಚಕರು ಸಮಿತಿಯ ಮೇಲೆ ಅತ್ಯಂತ ವಿಶ್ವಾಸವಿಟ್ಟು ಕೆಲಸವನ್ನು ನಿರ್ವಹಿಸಿದ್ದೇವೆ. ಯಾವುದೇ ಒತ್ತಡಕ್ಕೆ ಮಣಿಯದೆ ಪ್ರೀತಿ ವಿಶ್ವಾಸದಿಂದ ಸಮಿತಿಯ ಮೇಲೆ ವಿಶ್ವಾಸವಿಟ್ಟು ಎಲ್ಲರನ್ನೂ ಅತ್ಯಂತ ಗೌರವದಿಂದ ಕಾಣುತ್ತಾ ಕೆಲಸ ನಿರ್ವಹಿಸಿ ಗಣಪತಿಯ ಸೇವೆಯನ್ನು ಮಾಡಿದ ಸಮಿತಿಯ ಎಲ್ಲರನ್ನೂ ಭಾವನಾತ್ಮಕವಾಗಿ ಅಭಿನಂದಿಸಿದರು.


ಫೆ.07 ರಂದು ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕಳ ಇವರ ಉಪಸ್ಥಿತಿಯಲ್ಲಿ ಕ್ಷೇತ್ರದ ಎಲ್ಲಾ ಅರ್ಚಕರು ಮತ್ತು ಸಿಬ್ಬಂದಿ ವರ್ಗದವರು, ನಿರ್ಗಮಿತ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಅರ್ಚಕರು ಹಾಗೂ ಎಲ್ಲಾ ಸದಸ್ಯರನ್ನು ದೇವಳದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ಇವರು ದೇವರ ಎದುರಿನಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ಸಮಿತಿಯ ಎಲ್ಲರಿಗೂ ಗಣಪತಿ ದೇವರು ಕರೆದಾಗ ರಾತ್ರಿ ಹಗಲು ಎನ್ನದೆ ಬಂದು ದೇವರ ಸೇವೆಯನ್ನು ಮಾಡಿದ ನಿಮ್ಮೆಲ್ಲರನ್ನು ಮಹಾ ಗಣಪತಿ ದೇವರು ಅನುಗ್ರಹಿಸಲಿ ಎಂದು ಪ್ರಾರ್ಥಿಸಿ, ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿ ಬೀಳ್ಕೊಟ್ಟರು.

Related posts

ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಪ್ರಮಾಣ ವಚನ ಸ್ವೀಕಾರ: ಪ್ರಭು ಶ್ರೀರಾಮಚಂದ್ರನ ಹೆಸರಿನಲ್ಲಿ ಪ್ರಮಾಣ ವಚನ ಮಾಡಿ ಗಮನ ಸೆಳೆದ ಹರೀಶ್ ಪೂಂಜ

Suddi Udaya
error: Content is protected !!