ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬೆಳ್ತಂಗಡಿ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾಲೂಕು ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮವು ಫೆ.9ರಂದು ಬೆಳ್ತಂಗಡಿ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು.

‘ಮಗಳನ್ನು ಉಳಿಸಿ, ಮಗಳನ್ನು ಓದಿಸಿ’ ಯೋಜನೆಯ ಜಾಥಾ ಕಾರ್ಯಕ್ರಮಕ್ಕೆ ಪ್ರಧಾನ ಸಿವಿಲ್ ನ್ಯಾಯಾದೀಶರು ಹಾಗೂ ಬೆಳ್ತಂಗಡಿ ತಾ.ಕಾ.ಸೇ.ಸ ಕಾರ್ಯದರ್ಶಿ ಸಂದೇಶ್ ಕೆ ಚಾಲನೆ ನೀಡಿ ಹಾಗೂ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಾತನಾಡಿ ಅಂಗನವಾಡಿ ಕಾರ್ಯಕರ್ತೆಯರಿಗೆ, ಆಶಾ ಕಾರ್ಯಕರ್ತೆಯರಿಗೆ, ಎಲ್ಲಾ ಇಲಾಖೆಯ ಸಿಬ್ಬಂದಿ ವರ್ಗದವರಿಗೂ ಕಾನೂನಿನ ಬಗ್ಗೆ ಅರಿವಿರಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ.

ಪೋಕ್ಸೋ ಕಾಯ್ದೆ ಕೇವಲ ಹೆಣ್ಣು ಮಕ್ಕಳಿಗೆ ಮಾತ್ರವಲ್ಲ 18 ವರ್ಷದಿಂದ ಕೆಳಗಡೆ ಇರುವಂತಹ ಗಂಡು ಮಕ್ಕಳಿಗೂ ಕೂಡ ಅನ್ವಯಿಸುವಂತಹ ಕಾಯ್ದೆ ಇದಾಗಿದೆ. ತಾಯಂದಿರು ಇದರ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಬೇಕು.

ಎಷ್ಟೋ ಹೆಣ್ಣು ಮಕ್ಕಳು ದೌರ್ಜನ್ಯಕ್ಕೊಳಗಾದವರಿದ್ದಾರೆ, ಕಿರುಕುಳದಿಂದ ಕುಗ್ಗಿದ್ದಾರೆ, ಹಾಗಾಗಿ ಇದರ ಬಗ್ಗೆ ಅರಿವು ಬರಬೇಕು. ಮಕ್ಕಳು ತಾಯಂದಿರಲ್ಲಿ ಹೇಳಿಕೊಂಡಾಗ ತಕ್ಷಣ ಸ್ಪಂದಿಸಬೇಕು ಹಾಗಿದ್ದಾಗ ಮಾತ್ರ ಎಲ್ಲಿ ತಪ್ಪುಗಳು ನಡೆಯುತ್ತದೆ ಅದನ್ನು ತಡೆಗಟ್ಟಲು ಸಾಧ್ಯ ಎಂದರು.

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಮಾತಾನಾಡಿ ಮಹಿಳೆಯರ ಮತ್ತು ಮಕ್ಕಳ ಮೇಲೆ ನಡೆಯುವಂತಹ ದೌರ್ಜನ್ಯಕ್ಕೆ ಕಾನೂನಿನ ಮೂಲಕ ರಕ್ಷಣೆ ಇದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು. ಸ್ವಾಸ್ತ್ಯ ಸಮಾಜದ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಹಿರಿಯ ವಕೀಲ ಜೆ.ಕೆ ಪೌಲ್ ಜೀತ ಪದ್ಧತಿ ನಿರ್ಮೂಲನ ದಿನಾಚರಣೆ ಕುರಿತು ಮಾಹಿತಿ ನೀಡಿದರು. ಪಡಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈಧ್ಯಾಧಿಕಾರಿ ಡಾ. ಸಂಜಿತ್ ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆ ಬಗ್ಗೆ ಹಾಗೂ ಮಂಗಳೂರು ಬಾಲ ನ್ಯಾಯ ಮಂಡಳಿ ಸದಸ್ಯೆ ಶ್ರೀಮತಿ ಕಸ್ತೂರಿ ಬಾಲ್ಯ ವಿವಾಹ ಮತ್ತು ಪೋಕ್ಸೋ ಕುರಿತು ಮಾಹಿತಿ ನೀಡಿದರು.

ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕು ತಹಸೀಲ್ದಾರ್ ಪೃಥ್ವಿ ಸಾನಿಕ0, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ, ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್. ಉಪಸ್ಥಿತರಿದ್ದರು.

2022-23ನೇ ಸಾಲಿನ ಎಸ್ಎಸ್ಎಲ್ಸಿ, ಪಿಯುಸಿ ಯಲ್ಲಿ ಹೆಚ್ಚು ಅಂಕ ಪಡೆದು ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆಗೈದ ಕು. ಸುರಕ್ಷಿತಾ (613ಅಂಕ ) ಹಾಗೂ ಕು. ಗೌರವಿ (586ಅಂಕ ) ರವರಿಗೆ ಸಭೆಯಲ್ಲಿ ಸನ್ಮಾನಿಸಲಾಯಿತು.ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಪ್ರಿಯಾ ಆಗ್ನೇಸ್ ಪ್ರಾಸ್ತಾವಿಸಿ ಸ್ವಾಗತಿಸಿದರು. ರತ್ನಾವತಿ ಧನ್ಯವಾದವಿತ್ತರು.

Leave a Comment

error: Content is protected !!