23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

ಉಜಿರೆ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, ಬ್ಯಾಂಕ್ ಒಫ್ ಬರೋಡ ಉಜಿರೆ ಶಾಖೆ ಹಾಗೂ ಕರ್ನಾಟಕ ರಾಜ್ಯ ಟೈಲರ್ ಒಕ್ಕೂಟ ಉಜಿರೆ ವಲಯ ಇವರ ಸಹಕಾರದಲ್ಲಿ10 ದಿನಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್ )ತರಬೇತಿಯ ಸಮಾರೋಪ ಕಾರ್ಯಕ್ರಮ ಉಜಿರೆಯ ಚಿತ್ತಾರ ಟೈಲರಿಂಗ್ ಸಭಾಂಗಣದಲ್ಲಿ ನಡೆಯಿತು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹನಾಧಿಕಾರಿ ಸಚಿನ್ ಹೆಗ್ಡೆರವರು ಯಶಸ್ವಿಯಾಗಿ ತರಬೇತಿ ಮುಗಿಸಿದ ಮಹಿಳೆಯರಿಗೆ ಅಭಿನಂದನೆ ಸಲ್ಲಿಸಿದರು. ತರಬೇತಿ ಪಡೆದ ಮಹಿಳೆಯರು ಬ್ಯಾಂಕ್ ಸೌಲಭ್ಯ ಹಾಗೂ ಸರ್ಕಾರದಿಂದ ಸಿಗುವ ಸವಲತ್ತು ಉಪಯೋಗಿಸಿ ಸ್ವಂತ ಉದ್ಯೋಗ ಕೈಗೊಳ್ಳಲು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬ್ಯಾಂಕ್ ಒಫ್ ಬರೋಡ ಉಜಿರೆ ಶಾಖೆಯ ಮುಖ್ಯ ನಿಬಂಧಕಾರದ ಪ್ರಸಾದ್ ಬಿ. ಬ್ಯಾಂಕ್ ನಲ್ಲಿ ಸ್ವ ಉದ್ಯೋಗ ಮಾಡಲು ಮಹಿಳೆಯರಿಗೆ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ,ರಾಜ್ಯ ಟೈಲರ್ ಒಕ್ಕೂಟದ ಕ್ಷೇತ್ರ ಸಮಿತಿ ಅಧ್ಯಕ್ಷರಾದ ವೇದಾವತಿ ಜನಾರ್ಧನ್, ವಲಯ ಅಧ್ಯಕ್ಷರಾದ ರೂಪ ಜಗದೀಶ್, ವಲಯ ಕಾರ್ಯದರ್ಶಿ ಜೀನತ್, ಕ್ಷೇತ್ರ ಕಾರ್ಯದರ್ಶಿ ನಾಗೇಶ್, ತರಬೇತುದಾರರಾದ ಶ್ರೀಮತಿ ಸುಮನ ಉಪಸ್ಥಿತರಿದ್ದರು.

ಜಯ ಚಿದಾನಂದ್ ಕಾರ್ಯಕ್ರಮ ನಿರೂಪಣೆ ಮಾಡಿದರು.ಉಜಿರೆ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 28 ಮಹಿಳೆಯರು ಈ 10 ದಿವಸದ ತರಬೇತಿಯನ್ನು ಪಡೆದು ಪ್ರಮಾಣ ಪತ್ರ ಪಡೆದರು.

Related posts

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ವಾಣಿ ಪಿಯು ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ

Suddi Udaya

ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!