ಮಡಂತ್ಯಾರು :ದ.ಕ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ ಬೆಳ್ತಂಗಡಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಮಡಂತ್ಯಾರು ಇವರ ಸಂಯುಕ್ತ ಆಶ್ರಯದಲ್ಲಿ ಫೆ.09ರಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ನಡೆಯಿತು.
ಮಡಂತ್ಯಾರು ಪೇಟೆಯಿಂದ ಆರಂಭಿಸಿ ಕಾಲೇಜು ರಸ್ತೆ ಮುಖಾಂತರ ಗ್ರಾಮಪಂಚಾಯತ್ ಸಮುದಾಯ ಭವನದವರೆಗೆ ಸಂವಿಧಾನ ಜಾಗೃತಿ ಜಾಥಾವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸರ್ವ ಸದಸ್ಯರುಗಳು, ಕಾರ್ಯದರ್ಶಿ, ಸಿಬ್ಬಂದಿಗಳು, ತಾಲೂಕು ಐಇಸಿ ಸಂಯೋಜಕರಾದ ಶ್ರೀಮತಿ ವಿನಿಷ , ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು , ಸಂಜೀವಿನಿ ಒಕ್ಕೂಟದ ಎಮ್ ಬಿಕೆ, LCRP, ಪದಾಧಿಕಾರಿಗಳು/ಸದಸ್ಯರುಗಳು, ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲಾ ವಿಭಾಗದ ಶಿಕ್ಷಕರು/ ವಿದ್ಯಾರ್ಥಿಗಳು, ಸೇಕ್ರೇಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕರು, ಮಾಜಿ ಸೈನಿಕ ಕಾಂತಪ್ಪ ಗೌಡ, ಹಿ.ವರ್ಗಗಳ ಕಲ್ಯಾಣ ಇಲಾಖೆಯ ಶೇಷಗಿರಿ ನಾಯಕ್ , ಸಾರ್ವಜನಿಕರು ಭವ್ಯ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೂಪ ಎ.ಎಸ್ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವಿಸಿದರು. ಪಂಚಾಯತ್ ಕಾರ್ಯದರ್ಶಿಯವರಾದ ಶ್ರೀಮತಿ ಮೋರ್ಲಿನ್ ಕ್ರಿಸ್ತಿನ್ ಡಿಸೋಜ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಡಾ||ಪ್ರಕಾಶ್ ಎಸ್ ರವರು ಸಂವಿಧಾನ ಪೀಠಿಕೆ ಭೋದನೆ ಮಾಡಿದರು. ಮಂಗಳೂರಿನ ಕಲಾ ತಂಡದಿಂದ ಸಂವಿಧಾನ ಜಾಗೃತಿ ಮೂಡಿಸುವ ಗಾಯನ ಹಾಡಲಾಯಿತು. ಸಂವಿಧಾನ ಜಾಗೃತಿ ಕುರಿತು ವಿದ್ಯಾರ್ಥಿಗಳಿಗೆ ಆಯೋಜಿಸಿದ ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಪಂಚಾಯತ್ ವ್ಯಾಪ್ತಿಯ ಏಳು ಅಂಗನವಾಡಿಗಳಿಗೆ ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ತಾಲೂಕು ಸಮಾಜ ಕಲ್ಯಾಣ ಅಧಿಕಾರಿ, ತಾಲೂಕು ಐಇಸಿ ಸಂಯೋಜಕರಾದ ಶ್ರೀಮತಿ ವಿನಿಷ, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸರ್ವ ಸದಸ್ಯರುಗಳು, ಕಾರ್ಯದರ್ಶಿ, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು , ಸಂಜೀವಿನಿ ಒಕ್ಕೂಟದ MBK, LCRP, ಪದಾಧಿಕಾರಿಗಳು/ಸದಸ್ಯರುಗಳು, ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲಾ ವಿಭಾಗದ ಶಿಕ್ಷಕರು/ ವಿದ್ಯಾರ್ಥಿಗಳು, ಸೇಕ್ರೇಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕರು, ಮಾಜಿ ಸೈಜಿಕ ಕಾಂತಪ್ಪ ಗೌಡ, ಹಿ.ವರ್ಗಗಳ ಕಲ್ಯಾಣ ಇಲಾಖೆಯ ಶೇಷಗಿರಿ ನಾಯಕ್, ಗ್ರಾಮಸ್ಥರು ಉಪಸ್ಥಿತರಿದ್ದರು.
ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲಾ ವಿಭಾಗದ ಶಿಕ್ಷಕ ಧರಣೇಂದ್ರ ಕುಮಾರ್ ಜೈನ್ ರವರ ಕಾರ್ಯಕ್ರಮದ ನಿರೂಪಣೆಯೊಂದಿಗೆ ನೆರೆದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು .