ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

ಬೆಳ್ತಂಗಡಿ:ಗುರುವಾಯನಕೆರೆಯ ಕೆರೆ ಬಳಿ ಲಾರಿಯೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಫೆ 9 ರಂದು ಮುಂಜಾನೆ ನಡೆದಿದೆ.

ಗುರುವಾಯನಕೆರೆ ಕಾರ್ಕಳ ಹೆದ್ದಾರಿಯ ಕೆರೆಯ ಬಳಿ ಇರುವ ದೊಡ್ಡ ತಿರುವಿನಲ್ಲಿ ರಸ್ತೆ ಬದಿ ಇದ್ದ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬ ರಸ್ತೆಗೆ ಮುರಿದು ಬಿದ್ದ ಪರಿಣಾಮ ಕೆಲವು ತಾಸು ವಾಹನ ಸಂಚಾರಕ್ಕೆ ತಡೆಯುಂಟಾಯಿತು. ತಕ್ಷಣ ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದು ಅವರು ಬಂದು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಡಿಕ್ಕಿ ಹೊಡೆದ ಬಳಿಕ ಚಾಲಕ ಲಾರಿ‌ ಸಹಿತ ಪರಾರಿಯಾಗಿದ್ದಾನೆ. ಒಂದು ವೇಳೆ ಡಿಕ್ಕಿಯ ವೇಳೆ ಬೇರೆ ವಾಹನ ಸಂಚಾರಿಸುತಿದ್ದಲ್ಲಿ ಅಥವಾ ಸಾರ್ವಜನಿಕರು ನಡೆದುಕೊಂಡು
ಹೋಗುತಿದ್ದಲ್ಲಿ ದೊಡ್ಡ ಅನಾಹುತ ಸಂಭವಿಸುತಿತ್ತು ಅದೃಷ್ಟವಶಾತ್ ವಾಹನ ಹಾಗೂ ಜನ ಸಂಚಾರ ಇಲ್ಲದ ಕಾರಣ ದೊಡ್ಡ ಅಪಾಯ ತಪ್ಪಿದಂತಿದೆ. ವಿದ್ಯುತ್ ಕಂಬ ಹಾಕಲು ಮೆಸ್ಕಾಂ ಸಿಬ್ಬಂದಿಗಳು ಕ್ರಮ ಕೈಗೊಂಡಿದ್ದಾರೆ.

Related posts

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

Suddi Udaya
error: Content is protected !!