April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಆಡಳಿತಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಮುಖ್ಯ ಅಭ್ಯಾಗತರಾಗಿ ಕಡಬದ ಸರಸ್ವತಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವೆಂಕಟ್ರಮಣ ರಾವ್ ಆಗಮಿಸಿ ಸಂಸ್ಕಾರಯುತ ಶಿಕ್ಷಣದಿಂದ ದೇಶದ ಏಳಿಗೆ ಸಾಧ್ಯ, ವಿದ್ಯಾರ್ಥಿಗಳು ಉತ್ತಮ ಆದರ್ಶಗಳನ್ನು ಮೈಗೂಡಿಸುವ ಮೂಲಕ ಶಿಕ್ಷಣ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು. ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಜಾಲಿ ಓ ಎ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.


ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳು ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಿಗೆ ದೀಪವನ್ನು ಹಸ್ತಾಂತರಿಸಿದರು.
ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಪೂಜಿತ್ ಸ್ವಾಗತಿಸಿ, ಧನುಷ್ ಕೆ ಎನ್ ಕಾರ್ಯಕ್ರಮವನ್ನು ನಿರೂಪಿಸಿ, ತುಳಸಿ ಧನ್ಯವಾದಗೈದರು.

Related posts

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ ಹಾಗೂ ದೂರ ದೃಷ್ಟಿ ಯೋಜನೆಯ ಗ್ರಾಮ ಸಭೆ

Suddi Udaya

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಕಲ್ಮಂಜ ಮಿಯಾ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ತುಂಬೆದಲೆಕ್ಕಿ ಶಿಲಾಮಯ ಭಜನ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವ-ಧಾರ್ಮಿಕ ಸಭೆ

Suddi Udaya
error: Content is protected !!