ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ‘ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು’ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿವಾದಾತ್ಮಕ ಪೋಸ್ಟ್ ಹಾಕಿದ್ದು, ಇದು ರಾಜ್ಯಾದ್ಯಂತ ಭಾರೀ ಚರ್ಚೆಯನ್ನೇ ಹುಟ್ಟು ಹಾಕುತ್ತಿದೆ.

ಶಾಸಕ ಹರೀಶ್ ಪೂಂಜ ಅವರು ಫೇಸ್‌ಬುಕ್‌ನಲ್ಲಿ ‘ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು. ಈ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಸಲ್ಲಿಕೆಯಾಗಬೇಕು. ಹಿಂದೂಗಳು ಕಟ್ಟಿದ ತೆರಿಗೆ ಹಣ ಇತರ ಧರ್ಮದ ಜನರಿಗೆ ಸೇರುವುದು ಅನ್ಯಾಯ’ ಎಂದು ಪೋಸ್ಟ್ ಹಾಕಿದ್ದರು. ಇದು ಸಾಮಾಜಿಕ ಜಾಲತಾಣ, ರಾಜಕೀಯ ವಲಯದಲ್ಲಿ ಹೊಸ ವಿವಾದ ಹುಟ್ಟು ಹಾಕಿದೆ.


ವಿವಾದಕ್ಕೆ ಸಂಬಂಧಿಸಿ ಮಾಧ್ಯಮದ ಜತೆ ಮಾತನಾಡಿದ ಶಾಸಕ ಹರೀಶ್ ಪೂಂಜ ಅವರು, ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, “ಸಂಸದ ಡಿ.ಕೆ. ಸುರೇಶ್ ಕುಮಾರ್ ಅವರ ದೇಶ ವಿಭಜನೆ ಹೇಳಿಕೆಗೆ ಸಾಮಾನ್ಯ ರೀತಿ ಖಂಡನೆ ಮಾಡಿದರೆ ಅವರಿಗೆ ಅರ್ಥ ಆಗಲ್ಲ. ಅದಕ್ಕಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದೇನೆ. ಹಿಂದೂಗಳ ತೆರಿಗೆಯನ್ನು ಹಿಂದೂಗಳಿಗೆ ಅಭಿವೃದ್ಧಿ ಮಾಡಿ ಅಂತಾ ಕೇಳುವುದರಲ್ಲಿ ತಪ್ಪೇನಿದೆ ?,” ಎಂದು ಹೇಳಿದರು.
ಕಾಂಗ್ರೆಸ್‌ನವರು ಉತ್ತರ-ದಕ್ಷಿಣ ಭಾರತ ಅಂತಾ ವಿಭಜನೆ ಮಾಡುತ್ತಿದ್ದಾರೆ. ಹಾಗಿರುವಾಗ ಹಿಂದೂಗಳ ತೆರಿಗೆಯನ್ನು ಲೆಕ್ಕ ಹಾಕೋಕೆ ಕಷ್ಟವೇ ? ಪ್ರತಿಯೊಬ್ಬನ ಹೆಸರಿನ ಮುಂದೆ ಅವನ ಧರ್ಮವೂ ಉಲ್ಲೇಖವಾಗಿರುತ್ತದೆ. ಸಿಂಗಲ್ ಟ್ಯಾಪ್‌ನಲ್ಲಿ ತೆರಿಗೆಯನ್ನು ವಿಭಾಗಿಸಬಹುದಾಗಿದೆ,” ಎಂದು ಹೇಳಿಕೆ ನೀಡಿದ್ದಾರೆ.

Leave a Comment

error: Content is protected !!