31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

ಬಂಗಾಡಿ: ಬಂಗಾಡಿ-ಕೊಲ್ಲಿ ವಿದ್ಯುತ್ ಲೈನ್‌ನಲ್ಲಿ ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಗ್ರಾಹಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಬೆಳ್ತಂಗಡಿ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ತಿಳಿಸಿದ್ದಾರೆ.

ಬಂಗಾಡಿ-ಕೊಲ್ಲಿ ವಿದ್ಯುತ್ ಫೀಡರ್‌ನಲ್ಲಿ ಬಹಳಷ್ಟು ಸಮಸ್ಯೆಗಳಿವೆ. ಇಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಲ್ಲಿ ಆಗಾಗ ಸಮಸ್ಯೆಗಳು ಕಾಡುತ್ತಿದೆ. ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲ, ಜೊತೆಗೆ ಆಗಾಗ ವಿದ್ಯುತ್ ಕೈಗೊಡುತ್ತಿದೆ. 3 ಫೇಸ್ ವಿದ್ಯುತ್ ಇಲ್ಲದಿರುವುದರಿಂದ ಪಂಪು ಚಾಲನೆಯಾಗದೆ ಕೃಷಿಕರಿಗೆ ಬಹಳಷ್ಟು ಸಮಸ್ಯೆಯಾಗಿದೆ. ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲ, ಕೃಷಿ ತೋಟಗಳಿಗೆ ಹಾಗೂ ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಈ ಬಗ್ಗೆ ಮೇಲಾಧಿಕಾರಿಗಳಿಗೆ ಎಂಎಲ್‌ಸಿ ಹರೀಶ್ ಕುಮಾರ್ ಅವರಿಗೆ ದೂರು ನೀಡದ ನಂತರ ಸ್ವಲ್ಪ ಹೊತ್ತು 3 ಫೇಸ್ ವಿದ್ಯುತ್ ಬಂತು. ನಂತರ ಕೈಕೊಟ್ಟಿದೆ. ಇದರ ಬಗ್ಗೆ ಮೆಸ್ಕಾಂ ಇಲಾಖೆಯವರ ಗಮನಕ್ಕೆ ತಂದರೆ ಅವರು ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಸಂಬಂಧಪಟ್ಟವರು ಇದರ ಬಗ್ಗೆ ಕೂಡಲೇ ಸೂಕ್ತ ಕ್ರಮ ಕೈಗೊಂಡು ಬಂಗಾಡಿ-ಕೊಲ್ಲಿ ವಿದ್ಯುತ್ ಲೈನ್‌ಗೆ 3 ಫೇಸ್ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಮುಕುಂದ ಸುವರ್ಣ ಅವರು ಆಗ್ರಹಿಸಿದ್ದಾರೆ.

Related posts

ಮೇಲಂತಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಪಿಕಪ್ ಗೂಡ್ಸ್ ಟೆಂಪೋ

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಲಾಯಿಲ: ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya
error: Content is protected !!