ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಅರಸಿನಮಕ್ಕಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅರಸಿನಮಕ್ಕಿ ವಲಯದ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ ಶಿಶಿಲ ಒಕ್ಕೂಟದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಿಶಿಲ ದೇವಸ್ಥಾನದ ಆಡಳಿತ ಕಮಿಟಿಯ ಶ್ರೀನಿವಾಸ್ ಮೂಡಿತ್ತಾಯರವರು ಉದ್ಘಾಟಿಸಿದರು. ಜಿಲ್ಲೆಯ ಗೌರವಾನ್ವಿತ ನಿರ್ದೇಶಕರಾದ ಮಹಾಬಲ ಕುಲಾಲ್ ತರಬೇತಿ ಪಡಕೊಂಡು ಮನೆಯಲ್ಲಿ ಸುಮ್ಮನೆ ಕುಳಿತು ಕೊಳ್ಳದೆ ಟೈಲರ್ ಸ್ವಉದ್ಯೋಗವನ್ನು ಮುಂದುವರಿಸಿಕೊಂಡು ಆದಾಯ ಗಳಿಸಬೇಕು ಎಂದರು.

ಗ್ರಾಮಪಂಚಾಯಿತಿ ಅಧ್ಯಕ್ಷರಾಧ ಸುಧೀನ್ ರವರು ಸ್ವಉದ್ಯೋಗ ಮಾಡುವರೇ ಸರಕಾರದಿಂದ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ಸರ್, ಜ್ಞಾನವಿಕಾಸ ಯೋಜನಾಧಿಕಾರಿ ಅಮೃತ ಮೇಡಂ. ಮೇಲ್ವಿಚಾರಕರಾದ ಶಶಿಕಲಾ, ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್, ಸೇವಾಪ್ರತಿನಿಧಿ ಗಾಯತ್ರಿ, ರಶ್ಮಿತಾ ಒಕ್ಕೂಟದ ಅಧ್ಯಕ್ಷರು ಉಪಸ್ಥಿತರಿದ್ದರು

Leave a Comment

error: Content is protected !!