23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

ಉರುವಾಲು: ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ದೈವಗಳ ಪ್ರತಿಷ್ಠೆ ಮತ್ತು ವಾರ್ಷಿಕ ಜಾತ್ರೋತ್ಸವ ದೈವಗಳ ನೇಮೋತ್ಸವ ವಿವಿಧ ವೈದಿಕ ಧಾರ್ಮಿಕ ಹಾಗೂ ಸಭಾ ಕಾರ್ಯಕ್ರಮಗಳು ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಶುಭಾ ಆಶೀರ್ವಾದಗಳೊಂದಿಗೆ, ಎಡಪದವು ಬ್ರಹ್ಮಶ್ರೀ ವಿಷ್ಣುಮೂರ್ತಿ ತಂತ್ರಿಗಳ ಮಾರ್ಗದರ್ಶನದಲ್ಲಿ ಶ್ರೀ ವೆಂಕಟೇಶ ತಂತ್ರಿಗಳ ನೇತೃತ್ವದಲ್ಲಿ ಫೆ.15ರಿಂದ 22 ರವರೆಗೆ ನಡೆಯಲಿದೆ. ಸರ್ಕಾರದಿಂದ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ 25 ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ವಿ.ಪ.ಶಾಸಕ ಹರೀಶ್ ಕುಮಾರ್ 10 ಲಕ್ಷ ರೂಪಾಯಿ ಹಾಗೂ ಭಕ್ತರು ದೊಡ್ಡ ಮೊತ್ತದಲ್ಲಿ ಅನುದಾನ ದೇವಸ್ಥಾನದ ಅಭಿವೃದ್ಧಿಗೆ ನೀಡಿದ್ದಾರೆ. ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಡಾ. ಕೃಷ್ಣರಾಜ 11 ಲಕ್ಷ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ದಾಸಪ್ಪ ಗೌಡ 10 ಲಕ್ಷ, ಆಡಳಿತ ಸಮಿತಿ ಗೌರಾಧ್ಯಕ್ಷರಾದ ದಿನಕರ ಪೂಜಾರಿ ಮತ್ತು ಕುಟುಂಬದವರಿಂದ ಈಗಾಗಲೇ ದೇಣಿಗೆ ನೀಡಿರುತ್ತಾರೆ. ಗ್ರಾಮಸ್ಥರು- ಭಕ್ತರ ಸಹಕಾರದಿಂದ ತ್ವರಿತವಾಗಿ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅನ್ನದಾನ ಸೇವೆಗೆ ಸಾಕಷ್ಟು ಮಂದಿ ದೇಣಿಗೆ ನೀಡಿದ್ದಾರೆ ಹಾಗೂ ಹಲವು ರೀತಿಯಲ್ಲಿ ಗ್ರಾಮಸ್ಥರು ದೇಣಿಗೆ ನೀಡುತ್ತಿದ್ದು. ಎಲ್ಲರ ಸಂಕಲ್ಪದೊಂದಿಗೆ ಒಳ್ಳೆಯ ರೀತಿಯಲ್ಲಿ ಬ್ರಹ್ಮಕಲಶೋತ್ಸವ ನಡೆಯಬೇಕು ಎಂದು ಬ್ರಹ್ಮಕಲಶೋತ್ಸವ ಅಧ್ಯಕ್ಷ ಶಾಸಕ ಹರೀಶ್ ಪೂಂಜರು ಫೆ.10ರಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು

ಆಡಳಿತ ಮೊಕ್ತೇಸರ ಯೋಗಿಸ್ ಪೂಜಾರಿ ಕಡ್ತಿಲ ಮಾತನಾಡಿ ಎಪ್ಪತ್ತು ವರ್ಷಗಳ ಕಾಲ ಪೂಜೆ ಪುರಸ್ಕಾರ ಇಲ್ಲದೆ ನಶಿಸಿ ಹೋದಂತಹ ಕ್ಷೇತ್ರವನ್ನು ಹಿರಿಯರು ಸೇರಿಕೊಂಡು ನನ್ನ ತಂದೆಯಾದ ದಿನಕರ ಪೂಜಾರಿ ಆಡಳಿತ ಮೊಕ್ತೇಸರಾಗಿ ಜವಾಬ್ದಾರಿ ವಹಿಸಿ. ಹಂತ ಹಂತವಾಗಿ ಇಡೀ ಊರಿನ ಭಕ್ತರು ಸೇರಿಕೊಂಡು ಜೀರ್ಣ ವ್ಯವಸ್ಥೆಯಲ್ಲಿದ್ದ ದೇವಸ್ಥಾನವನ್ನು ಜಿರ್ಣೋದ್ಧಾರ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿ .2007 ರಲ್ಲಿ ಪ್ರತಿಷ್ಠಾ ಅಷ್ಠಬಂಧ ಕಲಶೋತ್ಸವ ನಡೆಯಿತು. ತದನಂತರ ಕ್ಷೇತ್ರದಲ್ಲಿ ನಿತ್ಯ ಪೂಜಾ ಸೇವಾ ಕಾರ್ಯಗಳು. ಜಾತ್ರೋತ್ಸವವು ನಿರಂತರ ನಡೆಯುತ್ತಿದ್ದು.. ಕ್ಷೇತ್ರದ ಸಾನಿಧ್ಯ ವೃದ್ಧಿಯ ದೃಷ್ಟಿಯಿಂದ ಕಳೆದ 2019 ರಲ್ಲಿ ಪುನ ಪ್ರತಿಷ್ಠೆ ಅಷ್ಟ ಬಂಧ ಬ್ರಹ್ಮ ಕಲಶೋತ್ಸವ ನೆರವೇರಿಸುವ ಸಂಕಲ್ಪ ಮಾಡಲಾಗಿದ್ದರು. ಅದೇ ಕಾಲದಲ್ಲಿ ಪ್ರಪಂಚವನ್ನೇ ಬಾಧಿಸಿದ ಕರೋನ ಕಾಯಿಲೆಯ ತಲೆದೋರಿತು. ಇದೀಗ ಮತ್ತೆ ಗತವೈಭವದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ, ವಾರ್ಷಿಕ ಜಾತ್ರೋತ್ಸವ, ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಲಿದೆ ಎಂದರು.
ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಕಲ್ಲಳಿಕೆ ಜೀರ್ಣೋದ್ಧಾರ ಕಾಮಗಾರಿಗಳ ಕಾರ್ಯಗಳ ಬಗ್ಗೆ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ಜೀರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷ ಸುನಿಲ್‌ ಗೌಡ ಅಣವು, ಆಡಳಿತ ಸಮಿತಿಯ ಕಾರ್ಯದರ್ಶಿ ಶ್ಯಾಮ್ ಭಟ್ ವಾದ್ಯಕೋಡಿ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಉದಯ ಟಿ. ತಾಳಿಂಜ, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಸುಂದರ ಶೆಟ್ಟಿ ಎಂಜಿರಪಲ್ಕೆ, ಆಡಳಿತ ಸಹ ಮೊಕ್ತಸರ ಸೇಸಪ್ಪ ರೈ ಮತ್ತು ಜನಾರ್ದನ ಗೌಡ ನಕಾಲು ಆರ್ಥಿಕ ಸಮಿತಿ ಸಂಚಾಲಕ ಪ್ರಭಾಕರ ಪೊಸದೊಂಡಿ, ಜೊತೆ ಕಾರ್ಯದರ್ಶಿ ಗಣೇಶ್ ಬನಾರಿ, ಕಾರ್ಯಯಾಲ ಸಂಚಾಲಕ ವಾರಿಜ ಶೆಟ್ಟಿ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ ಸ್ವಾಗತಿಸಿ, ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ಅಧ್ಯಕ್ಷ ಲಿಂಗಪ್ಪ ನಾಯ್ಕ ವಂದಿಸಿದರು.

Related posts

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya
error: Content is protected !!