ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ, ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹಯೋಗದೊಂದಿಗೆ,ಶಿಕ್ಷಕರ ಹಲವು ದಿನಗಳ ಬೇಡಿಕೆಯಾದ ಗುರುಸ್ಪಂದನ ಕಾರ್ಯಕ್ರಮವನ್ನು ಶ್ರೀ ಧ.ಮ.ಪ್ರೌಢಶಾಲೆ ಉಜಿರೆಯಲ್ಲಿ ನಡೆಸಲಾಯಿತು.
ಕಾರ್ಯಕ್ರಮವನ್ನು ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ರವರು ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಮಾಚಾರ್, ಸಂಘದ ಇದುವರೆಗಿನ ಸಾಧನೆಗಳ ಬಗ್ಗೆ ಮಾತನಾಡಿ ,ಎಲ್ಲರನ್ನೂ ಸಭೆಗೆ ಸ್ವಾಗತಿಸಿದರು.
ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ಐರಿನ್ ಡೇಸ, ತಾಲೂಕು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷರಾದ ಎಡ್ವರ್ಡ್ ಡಿಸೋಜ, ಜಿ.ಪಿ.ಟಿ.ಸಂಘದ ತಾಲೂಕು ಅಧ್ಯಕ್ಷರಾದ ಯೋಗೀಶ್ ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಅಧೀಕ್ಷಕರಾದ ಲಿಡ್ವಿನ್ ಫೆರ್ನಾಂಡೀಸ್ ಕಾರ್ಯಕ್ರಮದ ಬಗ್ಗೆ ಸ್ಥೂಲ ಪರಿಚಯ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಕಿಶೋರ್ ಕುಮಾರ್ ವಹಿಸಿದ್ದರು.ಸಂಘದ ಸಹ ಕಾರ್ಯದರ್ಶಿ ಶ್ರೀಮತಿ ಜ್ಯೋತಿ ಎಂ.ಎಸ್.ಕಾರ್ಯಕ್ರಮ ನಿರ್ವಹಿಸಿದರು. ನಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿಷಯ ನಿರ್ವಾಹಕರಾದ ಆದರ್ಶ್, ಇಮ್ರಾನ್, ಸುರೇಶ್, ವಜ್ರಕುಮಾರ್, ಸಂತೋಷ್ , ರಾಜೇಂದ್ರ ಮತ್ತು ಶಾರದಾ ಭಟ್ ಸಹಕಾರದಲ್ಲಿ ತಮ್ಮ ವ್ಯಾಪ್ತಿಯ ಶಿಕ್ಷಕರ ಸೇವಾಪುಸ್ತಕಗಳ ಪರಿಶೀಲಿಸಲು ಅವಕಾಶ ನೀಡಲಾಯಿತು. ಸಿ.ಆರ್.ಪಿ.ಗಳಾದ ಶ್ರೀಮತಿ ಪ್ರತಿಮ ,ಪ್ರಶಾಂತ್ ಮತ್ತು ವಿಲ್ಫ್ರೆಢ್ ಪಿಂಟೊ ಸಹಕರಿಸಿದರು.