29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

ಬೆಳ್ತಂಗಡಿ:ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.

ರಾಣಿಬೆನ್ನೂರು ತಾಲೂಕು ಹಾವೇರಿಯ ಮನೋಜ್ ಕುಮಾರ್ ಮತ್ತು ಮನೆಯವರು ಬೆಳ್ತಂಗಡಿ ಕಡೆಯಿಂದ ಕೊಟ್ಟಿಗೆಹಾರದ ಕಡೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿಯಾಗಿದ್ದು ಚಾಲಕ ಶ್ರೀಧರ ಸಣ್ಣ ನಿಂಗನವರ್ ಗಂಭೀರ ಗಾಯಗೊಂಡು ಉಜಿರೆಯ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ಮನೋಜ್ ಕುಮಾರ್ ಅವರ ತಾಯಿ ರೆಜಿನಾ ಗ್ಲೋರಿ ಹಾಗೂ ತಂಗಿ ಪ್ರಾರ್ಥನಾ ಗಾಯಗೊಂಡಿದ್ದು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳಾಲು: ಮಾಯ ಸ.ಉ.ಪ್ರಾ. ಶಾಲೆಯಲ್ಲಿ ರೂ.8.35 ಲಕ್ಷ ವೆಚ್ಚದಲ್ಲಿ ಶಾಲಾ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

Suddi Udaya

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya
error: Content is protected !!