ಮೇಲಂತಬೆಟ್ಟು : ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥವು ಫೆ. 11 ರಂದು ಮೇಲಂಬೆಟ್ಟು ಗ್ರಾಮದ ಕಲ್ಲಗುಡ್ಡೆಯಿಂದ ಗ್ರಾಮ ಪಂಚಾಯಿತಿ ವರೆಗೆ ಕಾಲ್ನಡಿಗೆ ಮೆರವಣಿಗೆ ಜಾಥಾ ಮೂಲಕ ಬರಮಾಡಿಕೊಳ್ಳಲಾಯಿತು.
ನಂತರ ಗ್ರಾಮ ಪಂಚಾಯತ್ ಕಛೇರಿಯ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಲೋಕನಾಥ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಪ್ರೌಢ ಶಾಲೆ ಸವಣಾಲು ಇಲ್ಲಿಯ ಶಾಲಾ ಮುಖ್ಯೋಪಾಧ್ಯಾಯರಾದ ಪ್ರಶಾಂತ್ ರವರು ಸಂವಿಧಾನ ಬಗ್ಗೆ ಪ್ರಾಸ್ತಾವಿಕ ಭಾಷಣ ಮಾಡಿದರು.
ವೇದಿಕೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರ , ಗ್ರಾಮ ಲೆಕ್ಕಾಧಿಕಾರಿ ಹೆರಾಲ್ಡ್, ಪಂಚಾಯತ್ ಸದಸ್ಯರಾದ ಶ್ರೀಮತಿ ದೀಪಿಕಾ, ಚಂದ್ರರಾಜ್ ಎಂ., ಚಂದ್ರಶೇಖರ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತಿ ಕಾರ್ಯದರ್ಶಿ ನಿರ್ಮಲ್ ಕುಮಾರ್ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಸಂವಿಧಾನ ಕುರಿತಾದ ಭಾಷಣ & ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಪೋಲೀಸ್ ಇಲಾಖೆಯವರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಎಂಬಿಕೆ ಮತ್ತು ಎಲ್.ಸಿ. ಆರ್ ಪಿ & ಸದಸ್ಯರು ಗ್ರಾಮಸ್ಥರು ಭಾಗವಹಿಸಿದ್ದರು.