September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

ಮಿತ್ತಬಾಗಿಲು : ಇಲ್ಲಿಯ ಕಿಲ್ಲೂರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ವಿಶೇಷವಾಗಿ ಮಕ್ಕಳ ಸಮಿತಿಯನ್ನು ಫೆ.11 ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಉದ್ಘಾಟಿಸಿ, ಕೂಪನ್ ಬಿಡುಗಡೆಗೊಳಿಸಿದರು.

ನಂತರ ಮಕ್ಕಳ ಸಮಿತಿ ರಚನೆ ಮಾಡಿ ಗಂಡು ಮಕ್ಕಳ ತಂಡಕ್ಕೆ ಉಜ್ವಲ ಮತ್ತು ಹೆಣ್ಣು ಮಕ್ಕಳ ತಂಡಕ್ಕೆ ಭವಿಷ್ಯ ಎಂಬ ರಚಿಸಿ ಮಕ್ಕಳಲ್ಲಿ ಕೆಲವರನ್ನು ಪ್ರಮುಖರನ್ನಾಗಿ ಮಾಡಿ ಎಲ್ಲರಿಗೂ ಜವಾಬ್ದಾರಿಯನ್ನು ಹಂಚಲಾಯಿತು. ದೇವಸ್ಥಾನದಲ್ಲಿ ಪ್ರಮುಖರು ಸೇರಿ ಮಕ್ಕಳಿಗೆ ಪ್ರತಿ ಭಾನುವಾರ ಬೆಳಗ್ಗೆ ಶ್ಲೋಕ ಹೇಳಿ ಕೊಡುವುದಾಗಿ ನಿರ್ಧರಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ಮೋಹನ್ ಬಂಗೇರ ಕಾರಿಂಜ, ಬ್ರಹ್ಮಕಲಶ ಸಮಿತಿ ಅಧ್ಯಕ್ಷರಾದ ಬಿ.ಕೆ ಧನಂಜಯ್ ರಾವ್, ಪ್ರಧಾನ ಕಾರ್ಯದರ್ಶಿ ಕೆ ದಾಸಪ್ಪ ಗೌಡ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಬಿ. ಕೆ ಲೋಕೇಶ್ ರಾವ್, ಪ್ರಧಾನ ಕಾರ್ಯದರ್ಶಿ ಡಿ.ದಿನೇಶ್ ಗೌಡ, ಗ್ರಾಮ ಪಂಚಾಯತಿ ಅಧ್ಯಕ್ಷ ವಿನಯ ಚಂದ್ರ ಮಾಧ್ಯಮ ಪ್ರಮುಖ್ ಸುರೇಂದ್ರ ಪೂಜಾರಿ ಹಾಗೂ ಬ್ರಹ್ಮಕಲಶ ಮತ್ತು ಜೀರ್ಣೋದರ ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ ಎಂ. ಮರುನೇಮಕ

Suddi Udaya

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya
error: Content is protected !!