ಕಳಿಯ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಬೆಳ್ಳಿ ಹಬ್ಬದ ಅಂಗವಾಗಿ ಮಾ.10 ರಂದು ಮುಲ್ಕಿಯ ಭವಾನಿ ಶಂಕರ ಮೈದಾನದಲ್ಲಿ ಜರಗುವ ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶದ ತಯಾರಿ ಬಗ್ಗೆ ಪೂರ್ವಭಾವಿ ಸಭೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆಯಿತು.
ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮತ್ತು ಗ್ರಾಮ ಸಮಿತಿಯ ಅಧ್ಯಕ್ಷ ದಿವಾಕರ ಮೇದಿನ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಬೆಳ್ತಂಗಡಿ ತಾಲೂಕು ಸಂಘದ ಮಾಜಿ ಅಧ್ಯಕ್ಷರು ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಅಧ್ಯಕ್ಷ ಪಿತಾಂಬರ ಹೆರಾಜೆ, ಮಾತನಾಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಜಾತ್ರೋತ್ಸವದಲ್ಲಿ ಮತ್ತು ಮಾರ್ಚ್ 10 ರಂದು ನಡೆಯುವ ಬಿಲ್ಲವರ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆ ಮೂಲಕ ಸಂಘಟನೆ ಶಕ್ತಿಯನ್ನು ಪ್ರದರ್ಶಿಸಬೇಕೆಂದು ಕರೆ ನೀಡಿದರು.
ಗುರುನಾರಾಯಣಸ್ವಾಮಿ ಸೇವಾ ಸಂಘದ ಮಾಜಿ ಉಪಾಧ್ಯಕ್ಷ , ಶೇಖರ ಬಂಗೇರ, ಕಾರ್ಯಕಾರಿ ಸಮಿತಿ ಸದಸ್ಯೆ ಶ್ರೀಮತಿ ವಿನೋಧಿನಿ ರಾಮಪ್ಪ, ಸುರೇಶ ಬಂಗೇರ ಮೆದಿನಾ, ಶ್ರೀಮತಿ ಶ್ವೇತಾ, ಶ್ರೀಮತಿ ಭಾಗ್ಯ, ಶ್ರೀಮತಿ ಪ್ರಮೀಳಾ, ಶ್ರೀಮತಿ ಶಶಿಕಲಾ, ಶ್ರೀಮತಿ ಪೂರ್ಣಿಮಾ, ಶ್ರೀಮತಿ ಮೋಹಿನಿ, ಶ್ರೀಮತಿ ವಸಂತಿ, ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು., ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಬೆಳ್ತಂಗಡಿ ತಾಲೂಕಿನ ಸಂಚಾಲಕಿ , ಶ್ರೀಮತಿ ಶಾಂತ ಬಂಗೇರ ರವರು ಪ್ರಸ್ತಾವಿಸಿ ಮಾ.10 ರಂದು ಮೂಲ್ಕಿಯಲ್ಲಿ ನಡೆಯುವ ಐತಿಹಾಸಿಕ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಭಾಗವಹಿಸಲು ಕರೆ ನೀಡಿದರು.
ಕಳಿಯ ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಮಧ್ವರಾಜ್ ಸ್ವಾಗತಿಸಿದರು. ಶ್ರೀಮತಿ ಕುಸುಮಾವತಿ ಬಂಗೇರ ಧನ್ಯವಾದ ಸಮರ್ಪಿಸಿದರು.