24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಫೆ.12ರಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ.

ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ.

ಫೆ.7ರಂದು ವಿಷ ಸೇವಿಸಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಇಂದು ಮುಂಜಾನೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ.

ಮೃತರು ತಂದೆ-ತಾಯಿ, ಸಹೋದರಿಯನ್ನು ಅಗಲಿದ್ದಾರೆ. ವಿದ್ಯಾರ್ಥಿನಿ ವಿಷ ಸೇವನೆಗೆ ಕಾರಣವೇನೆಂದು ತಿಳಿದುಬಂದಿಲ್ಲ.
ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Related posts

ಪಡಂಗಡಿ ಗ್ರಾ.ಪಂ. ಗ್ರಂಥಾಲಯಕ್ಕೆ ಪ್ರವೀಣ್ ರೈ ರವರಿಂದ 54 ಪುಸ್ತಕಗಳ ಕೊಡುಗೆ

Suddi Udaya

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು

Suddi Udaya

ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!