32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಬಾವಂತಬೆಟ್ಟು ನಿವಾಸಿ ಹಿರಿಯ ಸಹಕಾರಿ ಧುರೀಣ, ಸಹಕಾರ ರತ್ನ ನಿರಂಜನ ಬಾವಂತಬೆಟ್ಟು(75ವ)ರವರು ಇಂದು ಫೆ.12 ರಂದು ನಿಧನರಾಗಿದ್ದಾರೆ.

ಇವರು 1973ರಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಕಣಿಯೂರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸುಮಾರು 38 ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. ಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ ಅರುಣ, ಮಕ್ಕಳಾದ ಪವಿತ್ರ, ಚೈತ್ರ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಆತಿಥ್ಯದಲ್ಲಿ ಎಕ್ಸೆಲ್ ಪಿಯು ಕಾಲೇಜು ಸಹಭಾಗಿತ್ವದಲ್ಲಿ ಜೆಸಿಐ ಭಾರತದ ವಲಯ 15 ರ ಚಿಗುರು ತರಬೇತಿ ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಮತ ಯಾಚನೆ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya
error: Content is protected !!