ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೊಕ್ಕಡ ವಲಯ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭವು ಫೆ. 11 ರಂದು ನಡೆಯಿತು.

ಅಧ್ಯಕ್ಷತೆಯನ್ನು ನಿತೇಶ್ ಬಲ್ಲಾಳ ಅನುವಂಶಿಕ ಆಡಳಿತ ಮುಖ್ಯಸ್ಥರು ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿ ಯೋಜನೆಯ ಪ್ರತಿಯೊಂದು ಕಾರ್ಯಕ್ರಮಗಳಿಗೂ ಸಹಕಾರ ನೀಡುವುದಾಗಿ ತಿಳಿಸಿದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದಂತಹ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಮತ್ತು ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಸುರೇಶ್ ಮೋಯ್ಲಿ ಅವರು ಯೋಜನೆಯ ಕಾರ್ಯಕ್ರಮಗಳು ಬಡ್ಡಿದರಗಳು ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಉತ್ತಮವಾದ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್, ಕೊಕ್ಕಡ ಸೇವಾಸಹಕಾರಿ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಜೆ, ಒಕ್ಕೂಟ ಅಧ್ಯಕ್ಷ ಆನಂದ ಗೌಡ ಅನಾರು,ಕೊಕ್ಕಡ ವೈದ್ಯನಾಥೆಶ್ವರ ದೇವಸ್ಥಾನ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ, ಕೊಕ್ಕಡ ಹಿರಿಯ ವೈದ್ಯರು ಡಾ| ಮೊಹದಾಸ್ ಗೌಡ, ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ದೇರಾಜೆ , ವಲಯ ಒಕ್ಕೂಟ ಅಧ್ಯಕ್ಷ ಸೇಸಪ್ಪಮೂಲ್ಯ, ತಾಲೂಕು ಜನಜಾಗೃತಿ ಸದಸ್ಯರಾದ ಕುಶಾಲಪ್ಪ ಗೌಡ, ಕೊರಗಪ್ಪ ಗೌಡ, ಸುರೇಶ್ ನಲಿಕೆ , ಉಸ್ಮಾನ್, ವಲಯದ ಸೇವಾಪ್ರತಿನಿಧಿಗಳು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಉಪಸ್ಥಿತರಿದ್ದರು.


ಕಾರ್ಯಕ್ರಮದ ನಿರೂಪಣೆಯನ್ನು ಕೃಷಿ ಮೇಲ್ವಿಚಾರಕ ರಾಮ ಕುಮಾರ ನಿರೂಪಿಸಿ, ಜನಜಾಗೃತಿ ವೇದಿಕೆ ಸದಸ್ಯ ಪ್ರಗಪ್ಪ ಗೌಡ ಕೊಕ್ಕಡ ಧನ್ಯವಾದ ವಿತ್ತರು.

Related posts

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನಾ ಸಮಾರಂಭ

Suddi Udaya

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya
error: Content is protected !!