September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

ಬೆಳ್ತಂಗಡಿ : ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಇದರ ನೂತನ ಅಧ್ಯಕ್ಷರಾಗಿ ಪಿ.ಎಲ್.ಡಿ ಬ್ಯಾಂಕ್ ನ ನಿವೃತ್ತ ಮೆನೇಜರ್ ವೆಂಕಪ್ಪಯ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರವೀಣ್ ರೈ ಅವರನ್ನು ಆಯ್ಕೆ ಮಾಡಲಾಗಿದೆ.


ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆಂರ್ಬುಡ ಅಧ್ಯಕ್ಷತೆಯಲ್ಲಿ ತಾಲೂಕು ಸಮಿತಿ ಸಭೆ ನಡೆಯಿತು.
ಸಹಕಾರ ಭಾರತಿ ಜಿಲ್ಲಾಧ್ಯಕ್ಷ ಬಿ. ಸುಧಾಕರ್ ರೈ ಬೋಳಂತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣಪ್ರಕಾಶ್ ಕೆ., ಜಿಲ್ಲಾ ಕೋಶಾಧಿಕಾರಿ ಸುಬ್ರಹ್ಮಣ್ಯ ಭಟ್ ಭಾಗವಹಿಸಿ ಸಂಘಟನಾತ್ಮಕ ಮಾಹಿತಿ ನೀಡಿದರು.


ನೂತನ ತಾಲೂಕು‌ ಕಾರ್ಯಕಾರಿ ಸಮಿತಿ ರಚನೆ, ಅಭ್ಯಾಸವರ್ಗ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕೆ.ಎಂ.ಎಫ್ ನಿರ್ದೇಶಕ ಪದ್ಮನಾಭ ಅರ್ಕಜೆ, ಬಿಜೆಪಿ ಮಂಡಲಾಧ್ಯಕ್ಷ ಶ್ರೀನಿವಾಸ ರಾವ್, ಕೊಕ್ಕಡ ಸಿಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ, ಕಳಿಯ ಸಿಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ನಿಡ್ಲೆ ಸಿಎ ಬ್ಯಾಂಕ್ ಅಧ್ಯಕ್ಷ ರಮೇಶ್ ರಾವ್, ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಆರಿಗಾ, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ಉಪಾಧ್ಯಕ್ಷ ಸದಾನಂದ ಗೌಡ, ಗುರುವಾಯನಕೆರೆ ಸಿಎ ಬ್ಯಾಂಕ್ ಉಪಾಧ್ಯಕ್ಷ ವಡಿವೇಲು, ದಯಾನಂದ ಕರ್ಕೇರ ಉಪಸ್ಥಿತರಿದ್ದರು.

Related posts

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ನಾರಾವಿಯಲ್ಲಿ ಸರ್ವಧರ್ಮೀಯರ ಸಮಾವೇಶ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಪಡ್ಲಾಡಿ 35ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!