ಲಾಯಿಲ : ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥ ” ವು ಫೆ. 11 ರಂದು ಲಾಯಿಲ ಗ್ರಾಮದ ಲಾಯಿಲ ಜಂಕ್ಷನ್ ಬಳಿಯಿಂದ ಗ್ರಾಮ ಪಂಚಾಯಿತಿ ವರೆಗೆ ಕರ್ನೋಡಿ ಶಾಲಾ ಮಕ್ಕಳ ಬ್ಯಾಂಡ್ ಸೆಟ್ ನೊಂದಿಗೆ ಕಾಲ್ನಡಿಗೆ ಮೆರವಣಿಗೆ ಜಾಥಾ ಮೂಲಕ ಬರಮಾಡಿಕೊಳ್ಳಲಾಯಿತು.
ನಂತರ ಗ್ರಾಮ ಪಂಚಾಯತ್ ಕಛೇರಿಯ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಜಯಂತಿ ಎಂ.ಕೆ ಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ದಲಿತ ಮುಖಂಡರಾದ ಶೇಖರ್ ಲಾಯಿಲ ಅವರು ಸಂವಿಧಾನ ಬಗ್ಗೆ ಪ್ರಾಸ್ತಾವಿಕ ಭಾಷಣ ಮಾಡಿದರು ಮತ್ತು ತನ್ನ ಸೊಸೆಯ ಮದುವೆಯ ಅಂಗವಾಗಿ ಮೂರು ಸರ್ಕಾರಿ ಶಾಲೆಗಳಿಗೆ “ಸಂವಿಧಾನ ಓದು” ಪುಸ್ತಕವನ್ನು ನೀಡಿದರು.
ವೇದಿಕೆಯಲ್ಲಿ ಉಪಾಧ್ಯಕ್ಷರಾದ ಸುಗಂಧಿ ಜಗನ್ನಾಥ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ರತ್ನಾವತಿ, ಹಿ. ಪ್ರಾ. ಶಾಲೆ ಕರ್ನೋಡಿ ಲಾಯಿಲ ಮುಖ್ಯೋಪಾಧ್ಯಾಯರು ಜಗನ್ನಾಥ ಎಂ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ದಲಿತ ಮುಖಂಡ ಜಗನ್ನಾಥ ಲಾಯಿಲ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತಿ ಲೆಕ್ಕ ಸಹಾಯಕರಾದ ಸುಪ್ರೀತಾ ಎಸ್ ಶೆಟ್ಟಿ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು, ಕಾರ್ಯಕ್ರಮದಲ್ಲಿ ಸಂವಿಧಾನ ಕುರಿತಾದ ಭಾಷಣ & ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಭಾಗವಹಿಸಿದ್ದರು.