24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

ಇಳಂತಿಲ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಇಳಂತಿಲ ಇವರ ಜಂಟಿ ಆಶ್ರಯದಲ್ಲಿ ಫೆ.13 ರಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಂಡೆತಡ್ಕ ಶಾಲಾ ಬಳಿಯಿಂದ ಭವ್ಯ ಮೆರವಣಿಗೆ ಬೈಕ್ ರ್‍ಯಾಲಿ , ಶಾಲಾ ಮಕ್ಕಳ ಬ್ಯಾಂಡ್ ಸೆಟ್, ಸಂಜೀವಿನಿ ಒಕ್ಕೂಟದವರು ಹಾಗೂ ಪುನರ್ವಸತಿ ಕಾರ್ಯ ವಿಭಾಗ, ಸ್ವಸಹಾಯ ಸಂಘದವರ ಕಲಶದ ಮೂಲಕ ಗ್ರಾಮ ಪಂಚಾಯತ್ ಸಭಾಭವನದ ವರೆಗೆ ಸಂವಿಧಾನ ಜಾಗೃತಿ ಜಾಥಾವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿವರ್ಗ, ನರೇಗಾ ತಾಲೂಕು ಐಇಸಿ ಸಂಯೋಜಕರು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಎಮ್ ಬಿ ಕೆ, ಎಲ್ ಸಿ ಆರ್ ಪಿ, ಸ್ವಸಹಾಯ ಸಂಘದ ಸದಸ್ಯರು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕರು, ಸಮುದಾಯ ಆರೋಗ್ಯ ಅಧಿಕಾರಿ, ಸರಕಾರಿ ಉನ್ನತ್ತೀಕರಿಸಿದ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಭವ್ಯ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು.

ಕಾರ್ಯಕ್ರಮವನ್ನು ನಾಡಗೀತೆಯೊಂದಿಗೆ ಪ್ರಾರಂಭಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಇವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವಿಸಿದರು ಮತ್ತು ಸಂವಿಧಾನ ಪೀಠಿಕೆಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಜೀವ ನಾಯ್ಕ ಭೋಧನೆ ಮಾಡಿದರು. ಸಂವಿಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ನೀಡಿದರು. ಮಂಗಳೂರಿನ ಕಲಾ ತಂಡದಿಂದ ಸಂವಿಧಾನ ಜಾಗೃತಿ ಕುರಿತು ಗೀತಾ ಗಾಯನ ಹಾಗೂ ಪ್ರಹಸನ ಪ್ರದರ್ಶಿಸಿದರು. ಕಾರ್ಯಕ್ರಮವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿರೂಪಿಸಿ ಸ್ವಾಗತಿಸಿದರು. ಕಾರ್ಯದರ್ಶಿ ಧನ್ಯವಾದ ನೀಡಿದರು. ಕಾರ್ಯಕ್ರಮದ ಯಶಸ್ವಿಗೆ ಸಿಬ್ಬಂದಿಗಳು ಸಹಕರಿಸಿದರು.

Related posts

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

Suddi Udaya

ಕಕ್ಯಪದವು : ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಉಚಿತ ಐಬಿಪಿಎಸ್ ಪರೀಕ್ಷಾ ತರಬೇತಿಗೆ ಅಧೀಕೃತ ಚಾಲನೆ:

Suddi Udaya

ನಿರಂಜನ್ ಬಾವಂತಬೆಟ್ಟು ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಧರ್ಮಸ್ಥಳ :ನಡುಗುಡ್ಡೆ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಪ್ರಯುಕ್ತ 10ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!