25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

ಬೆಳ್ತಂಗಡಿ: ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಫೆ.17ಕ್ಕೆ ಮುಗಿಯಲಿದೆ. ಈ ನಡುವೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನಂಬ‌ರ್ ಪ್ಲೇಟ್ ಅಳವಡಿಕೆಗೆ 3ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ ಅಧಿವೇಶನದಲ್ಲಿ ತಿಳಿಸಿದ್ದಾರೆ.


ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ನಂಬ‌ರ್ ಪ್ಲೇಟ್ (HSRP) ಅಳವಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆಬ್ರವರಿ 17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು. ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ವಿಚಾರ ಇದೀಗ ವಿಧಾನಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಪರಿಷತ್ ಸದಸ್ಯ ಮಾದೇಗೌಡ ಪ್ರಶ್ನಿಸಿದ್ದು, ಅವಧಿ ವಿಸ್ತರಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ 3 ತಿಂಗಳು ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದ್ದಾರೆ.

Related posts

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ತೆಕ್ಕಾರಿನಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮಂತ್ರಿಮಂಡಲದ ಪದಗ್ರಹಣ ಮತ್ತು ಶಾಲಾ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

Suddi Udaya
error: Content is protected !!