ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ಗ್ರಾಮ ಸಭೆ ಫೆ.14 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.
ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಮಾಜದಲ್ಲಿ ಮಹಿಳೆ ಮತ್ತು ಮಕ್ಕಳಿಗೆ ಆಗುತ್ತಿರುವ ಕೌಟುಂಬಿಕ ದೌರ್ಜನ್ಯ,ಬಾಲ್ಯ ವಿವಾಹ, ಪೋಕ್ಸೊ ಕಾಯಿದೆ ಬಗ್ಗೆ ಮಾಹಿತಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಸುಮನ ಎಸ್ ನೀಡಿದರು.
ಕಾನೂನು ಸುವ್ಯವಸ್ಥಿತವಾಗಿರಲು ಮಹಿಳೆಯರ ಜವಾಬ್ದಾರಿ ಹೆಚ್ಚಿದೆ. ಮಕ್ಕಳು ಮೊಬೈಲ್ ಬಳಕೆ ಮಾಡುವುದರಿಂದ ವಿಧ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹಾಗೂ ಜೀವನಕ್ಕೆ ಕಂಟಕವಾಗುತ್ತದೆ ತಾಯಂದಿರು ಎಚ್ಚರಿಕೆಯಿಂದ ಮಕ್ಕಳು ದುಶ್ಚಟಕ್ಕೆ ಬಲಿಯಾಗುವುದನ್ನು ತಪ್ಪಿಸಲು ಸಾಧ್ಯ, ಹಾಗೂ ಇತ್ತೀಚೆಗೆ ಅಪ್ರಾಪ್ತ ಮಕ್ಕಳು ದ್ವಿಚಕ್ರ ವಾಹನ ಚಲಾಯಿಸುವ ಅನೇಕ ತೊಂದರೆಗಳು ಆಗುತ್ತಿದೆ ಎಂದು ಬೆಳ್ತಂಗಡಿ ಮಹಿಳಾ ಪೋಲಿಸ್ ಸವೀತ ಶೆಟ್ಟಿ ತಿಳಿಸಿದರು.
ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯತಿ ಸದಸ್ಯರಾದ ಸುಧಾಕರ ಮಜಲು, ಅಬ್ದುಲ್ ಕರೀಂ ಕೆ.ಎಮ್. ಕುಸುಮ ಎನ್.ಬಂಗೇರ, ಮೋಹಿನಿ ಬಿ.ಗೌಡ, ಮರೀಟಾ ಪಿಂಟೋ, ಶ್ವೇತಾ ಶ್ರೀನಿವಾಸ್, ಪುಷ್ಪ ಮತ್ತು ಕಳಿಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕುಂಞ ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಸಂಘದ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು ಮತ್ತು ಮಹಿಳೆಯರು ಭಾಗವಹಿಸಿದರು.