24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

ಬೆಳ್ತಂಗಡಿ: ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಫೆ.17ಕ್ಕೆ ಮುಗಿಯಲಿದೆ. ಈ ನಡುವೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನಂಬ‌ರ್ ಪ್ಲೇಟ್ ಅಳವಡಿಕೆಗೆ 3ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ ಅಧಿವೇಶನದಲ್ಲಿ ತಿಳಿಸಿದ್ದಾರೆ.


ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ನಂಬ‌ರ್ ಪ್ಲೇಟ್ (HSRP) ಅಳವಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆಬ್ರವರಿ 17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು. ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ವಿಚಾರ ಇದೀಗ ವಿಧಾನಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಪರಿಷತ್ ಸದಸ್ಯ ಮಾದೇಗೌಡ ಪ್ರಶ್ನಿಸಿದ್ದು, ಅವಧಿ ವಿಸ್ತರಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ 3 ತಿಂಗಳು ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದ್ದಾರೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

Suddi Udaya

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ