37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಇಂದಬೆಟ್ಟು ಇವರ ಜಂಟಿ ಆಶ್ರಯದಲ್ಲಿ ಸಂವಿಧಾನ ಜಾಗೃತ ಜಾಥವನ್ನು ಫೆ.14ರಂದು ಇಂದಬೆಟ್ಟು ಗ್ರಾಮ ಪಂಚಾಯತದ ಇಂದಬೆಟ್ಟು ಪ್ರಯಾಣಿಕರ ಬಸ್ಸು ತಂಗುದಾಣದಿಂದ ಇಂದಬೆಟ್ಟುಗ್ರಾಮ ಪಂಚಾಯತ್ ಸಭಾಂಗಣದ ವರೆಗೆ ಶಾಲಾ ಮಕ್ಕಳ ಕಾಲ್ನಡಿಗೆ , ಬೈಕ್, ರಿಕ್ಷಾ ವಾಹನಗಳ ಮೆರವಣಿಗೆಯ ಜಾಥಾ ಮೂಲಕ ಬರಮಾಡಿಕೊಳ್ಳಲಾಯಿತು.

ಸಂವಿಧಾನ ಜಾಗೃತಿ ಜಾಥಾವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿವರ್ಗ, ನರೇಗಾ ತಾಲೂಕು ಐಇಸಿ ಸಂಯೋಜಕರು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಎಮ್ ಬಿ ಕೆ, ಎಲ್ ಸಿ ಆರ್ ಪಿ, ಸ್ವಸಹಾಯ ಸಂಘದ ಸದಸ್ಯರು, ಸಮುದಾಯ ಆರೋಗ್ಯ ಅಧಿಕಾರಿ, ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಭವ್ಯ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು.

ಕಾರ್ಯಕ್ರಮವನ್ನು ನಾಡಗೀತೆಯೊಂದಿಗೆ ಪ್ರಾರಂಭಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀಮತಿ ಆಶಾಲತಾ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಇವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವಿಸಿದರು ಮತ್ತು ಸಂವಿಧಾನದ ಬಗ್ಗೆ ಪ್ರಾಸ್ತಾವಿಕ ನುಡಿ ಮಾತನಾಡಿದರು. ಪೀಠಿಕೆಯನ್ನು ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ಇವರು ಭೋಧನೆ ಮಾಡಿದರು. ಸಂವಿಧಾನ ಕಾರ್ಯಕ್ರಮದ ಸ್ಪರ್ದೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಪಂಚಾಯತ್ ವತಿಯಿಂದ ಬಹುಮಾನ ನೀಡಲಾಯಿತು. ಮಂಗಳೂರಿನ ಕಲಾ ತಂಡದಿಂದ ಸಂವಿಧಾನ ಜಾಗೃತಿ ಕುರಿತು ಗೀತಾ ಗಾಯನ ಹಾಗೂ ಪ್ರಹಸನ ಪ್ರದರ್ಶಿಸಿದರು.

ಕಾರ್ಯಕ್ರಮವನ್ನು ಪಂಚಾಯತ್ ಕಾರ್ಯದರ್ಶಿಯವರು ನಿರೂಪಿಸಿ ಸ್ವಾಗತಿಸಿದರು. ಕಿಶೋರ್ ಎಂ ಮುಖ್ಯೋಪಾದ್ಯಾಯರು ಸ.ಹಿ.ಪ್ರಾ ಶಾಲೆ ದೇವನಾರಿ ರವರು ಧನ್ಯವಾದ ನೀಡಿದರು. ಕಾರ್ಯಕ್ರಮದ ಯಶಸ್ವಿಗೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಸಹಕರಿಸಿದರು.

Related posts

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳ ಮಾಹಿತಿ ಕಾರ್ಯಕ್ರಮ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

Suddi Udaya

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya
error: Content is protected !!