April 2, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾಯಕ್ಸ್ ಫರ್ಟಿಲಿಟಿ ಕ್ಲಿನಿಕ್ ಮತ್ತು ಐವಿಎಫ್ ಸೆಂಟರ್ ಸಹಯೋಗದಲ್ಲಿ ಫೆ. 14ರಂದು ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ ನಡೆಯಿತು. ಶಿಬಿರದ ಉದ್ಘಾಟನೆಯನ್ನು ಡಾ. ನಾಯಕ್ಸ್ ಫರ್ಟಿಲಿಟಿ ಕ್ಲಿನಿಕ್ ಮತ್ತು ಐವಿಎಫ್ ಸೆಂಟರ್ ಸಂತಾನೋತ್ಪತ್ತಿ ಔಷಧ ಕನ್ಸಲ್ಟೆಂಟ್ ಆಗಿರುವ ಡಾ. ಪ್ರಮೋದ ಲಕ್ಷ್ಮಣ್ ನೆರವೇರಿಸಿದರು.

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್ ಮಾತನಾಡುತ್ತಾ, ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಂತೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಇವರ ಸಹಕಾರದಲ್ಲಿ ಈ ಆಸ್ಪತ್ರೆಯು ಹಲವಾರು ಉಚಿತ ವೈದ್ಯಕೀಯ ಶಿಬಿರಗಳನ್ನು ಗ್ರಾಮೀಣ ಭಾಗದಲ್ಲಿ ಅವರು ಇರುವ ಜಾಗಕ್ಕೆ ಹೋಗಿ ಮಾಡುವ ಮೂಲಕ ಗ್ರಾಮೀಣ ಜನತೆಯ ಆರೋಗ್ಯ ರಕ್ಷಣೆಗಾಗಿ ಶ್ರಮಿಸುತ್ತಿದೆ. ನೂರಾರು ಉಚಿತ ಶಿಬಿರಗಳಿಂದ ಜನಮನ ಗೆದ್ದಿರುವ ನಮ್ಮ ಆಸ್ಪತ್ರೆ ಈ ದಿನ ವಿಶೇಷವಾಗಿ ಮಹಿಳೆಯರ ಆರೋಗ್ಯ ಸಮಸ್ಯೆಗಳ ನಿವಾರಣೆಗಾಗಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದರು.

ಶಿಬಿರದಲ್ಲಿ ಸ್ತ್ರೀರೋಗ ತಪಾಸಣೆ, ಬಂಜೆತನ ತಪಾಸಣೆ, ಮುಟ್ಟಿನ ಅಸ್ವಸ್ಥತೆಗಳು, ಮೂತ್ರನಾಳದ ಸೋಂಕು ತಪಾಸಣೆ, ಸ್ತನದ ತಪಾಸಣೆ, ಗರ್ಭಾಶಯದ ತಪಾಸಣೆ, ಮಹಿಳೆಯರ ಕ್ಯಾನ್ಸರ್ ಮುಂತಾದ ತಪಾಸಣೆಗಳನ್ನು ಉಚಿತವಾಗಿ ಮಾಡಲಾಯಿತು.

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ಸ್ವರ್ಣಲತಾ, ಡಾ. ಪ್ರಿಯಾಂಕ, ಡಾ. ಅನ್ವಿತಾ, ಡಾ. ಕಮಲಾ ಭಟ್, ಮುಖ್ಯ ವೈದ್ಯಾಧಿಕಾರಿ ಡಾ. ಸಾತ್ವಿಕ್ ಜೈನ್, ನರ್ಸಿಂಗ್ ಅಧೀಕ್ಷಕಿ ಶೆರ್ಲಿ ಹಾಗೂ ಡಾ. ನಾಯಕ್ಸ್ ಫರ್ಟಿಲಿಟಿ ಕ್ಲಿನಿಕ್ ಮತ್ತು ಐವಿಎಫ್ ಸೆಂಟರ್ ಕೋ-ಆರ್ಡಿನೇಟರ್ ಡಾ. ಲಿಡ್ವಿನ್ ಉಪಸ್ಥಿತರಿದ್ದರು. 125 ಮಂದಿ ಶಿಬಿರದ ಸದುಪಯೋಗ ಪಡೆದಕೊಂಡರು. ಜಗನ್ನಾಥ ಎಂ ಕಾರ್ಯಕ್ರಮ ನಡೆಸಿಕೊಟ್ಟರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya
error: Content is protected !!