ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

ಉರುವಾಲು: ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ದೈವಗಳ ಪ್ರತಿಷ್ಠೆ ಮತ್ತು ವಾರ್ಷಿಕ ಜಾತ್ರೋತ್ಸವ ದೈವಗಳ ನೇಮೋತ್ಸವ ವಿವಿಧ ವೈದಿಕ ಧಾರ್ಮಿಕ ಹಾಗೂ ಸಭಾ ಕಾರ್ಯಕ್ರಮಗಳು ಫೆ.15ರಿಂದ 22 ರವರೆಗೆ ಎಡಪದವು ಬ್ರಹ್ಮಶ್ರೀ ವಿಷ್ಣುಮೂರ್ತಿ ತಂತ್ರಿಗಳ ಮಾರ್ಗದರ್ಶನದಲ್ಲಿ ಶ್ರೀ ವೆಂಕಟೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಇಂದು ಬೆಳಿಗ್ಗೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ಋತ್ವಿಜ್ವರ ಸ್ವಾಗತ, ಸ್ವಸ್ತಿವಾಚನ, ಸಾಮೂಹಿಕ ಪ್ರಾರ್ಥನೆ, ತೋರಣ ಮೂಹೂರ್ತ, ಉಗ್ರಾಣ ಮುಹೂರ್ತ , ಮಹಾಪೂಜೆ ನಡೆಯಿತು,

ಉಗ್ರಾಣ ಮುಹೂರ್ತದ ಉದ್ಘಾಟನೆಯನ್ನು ಗುರುವಾಯನಕೆರೆ ಶ್ರೀ.ಕ್ಷೇ.ಧ.ಗ್ರಾ.ಯೋ ಯೋಜನಾಧಿಕಾರಿ ದಯಾನಂದ ಪೂಜಾರಿ ನೆರವೇರಿಸಿದರು.

ಕಾರ್ಯಾಲಯ ಉದ್ಘಾಟನೆಯನ್ನು ಪಾರೆಂಕಿ ಮಹಿಷಮರ್ದಿನಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಧರ್ ರಾವ್ ಪೇಜಾವರ ನೆರವೇರಿಸಿದರು.

ಈ ಸಂದರ್ಭದಲ್ಲಿಆಡಳಿತ ಮೊಕ್ತೇಸರ ಯೋಗಿಸ್ ಪೂಜಾರಿ ಕಡ್ತಿಲ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ಜೀರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷ ಸುನಿಲ್‌ ಗೌಡ ಅಣವು, ಆಡಳಿತ ಸಮಿತಿಯ ಕಾರ್ಯದರ್ಶಿ ಶ್ಯಾಮ್ ಭಟ್ ವಾದ್ಯಕೋಡಿ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಉದಯ ಟಿ. ತಾಳಿಂಜ, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಸುಂದರ ಶೆಟ್ಟಿ ಎಂಜಿರಪಲ್ಕೆ, ಆಡಳಿತ ಸಹ ಮೊಕ್ತಸರ ಸೇಸಪ್ಪ ರೈ ಮತ್ತು ಜನಾರ್ದನ ಗೌಡ ನಕಾಲು ಆರ್ಥಿಕ ಸಮಿತಿ ಸಂಚಾಲಕ ಪ್ರಭಾಕರ ಪೊಸದೊಂಡಿ, ಜೊತೆ ಕಾರ್ಯದರ್ಶಿ ಗಣೇಶ್ ಬನಾರಿ, ಕಾರ್ಯಯಾಲ ಸಂಚಾಲಕ ವಾರಿಜ ಶೆಟ್ಟಿ, ವಿವಿಧ ಸಮಿತಿಯ ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ “ಪೋಷಕರ – ಶಿಕ್ಷಕರ ಸಭೆ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

Suddi Udaya

ಜೆ ಡಿ ಎಸ್ ಅಭ್ಯರ್ಥಿಯಿಂದ ತಾಲೂಕಿನಲ್ಲಿ ಮತಯಾಚನೆ   

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಾಗಾರ

Suddi Udaya

ವಾಣಿ ಆಂ.ಮಾ. ಶಾಲೆಯ ಕು. ಶಾನ್ವಿ ಕುಲಾಲ್ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!