ಕಳಿಯ: ವೈಷ್ಣವಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ ) ಕಳಿಯ ಇದರ ವಾರ್ಷಿಕ ಮಹಾಸಭೆ ಯನ್ನು ಫೆ.14 ರಂದು ಕಳಿಯ ಪಂಚಾಯತ್ ನ ಸಭಾಭವನದಲ್ಲಿ ನಡೆಸಲಾಯಿತು.
ಸಭೆಯು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವಿಜಯಶ್ರೀ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಹಾಸಭೆಯು ಪಾರ್ಥನೆಯೊಂದಿಗೆ ಆರಂಭಿಸಲಾಯಿತು. ಪಂಚಾಯತ್ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು, ದೀಪ ಬೆಳಗಿಸುವುದರ ಮೂಲಕ ಮಹಾಸಭೆಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನೆ ಮಾಡಿದ ಪಂಚಾಯತ್ ಅಧ್ಯಕ್ಷರು ಶುಭ ಹಾರೈಸಿದರು. ಬಂದಂತಹ ಎಲ್ಲಾ ಗಣ್ಯರನ್ನು ಹೂಗುಚ್ಚ ನೀಡುವುದರ ಮೂಲಕ ಸ್ವಾಗತಿಸಲಾಯಿತು.
ಒಕ್ಕೂಟ ವರದಿ ಮತ್ತು ಖರ್ಚು ವೆಚ್ಚವನ್ನು ಸಭೆಯಲ್ಲಿ ಎಮ್.ಬಿ.ಕೆ ಪ್ರಜ್ಞಾ ಮಂಡಿಸಿದರು. ಈ ಸಂದರ್ಭದಲ್ಲಿ ಒಕ್ಕೂಟ ವತಿಯಿಂದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ನಿತೇಶ್ ಇವರಿಗೆ ಸನ್ಮಾನಿಸಲಾಯಿತು. ನಂತರ ಇವರು ಎನ್. ಆರ್. ಎಲ್. ಎಂ. ನ ಯೋಜನೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು.
ತಾಲೂಕು ವಲಯ ಮೇಲ್ವಿಚಾರಕಿಯಾದ ಶ್ರೀಮತಿ ವೀಣಾ ರವರು ಎನ್. ಆರ್. ಎಲ್. ಎಂ. ನ ಯೋಜನೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು.
ನಂತರ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಒಕ್ಕೂಟದ ನೂತನವಾಗಿ ಆಯ್ಕೆಯಾದ ಕಾರ್ಯದರ್ಶಿ, ಜತೆ ಕಾರ್ಯದರ್ಶಿ ಕೋಶಾಧಿಕಾರಿ ಆಯ್ಕೆಯಾದರು. ನಂತರ ಅಧ್ಯಕ್ಷರಿಗೆ ಹೂಗುಚ್ಛ ನಡವಳಿ ಕೊಡುದರ ಮೂಲಕ ಹಸ್ತಾಂತರ ಮಾಡಲಾಯಿತು. ಹಾಗೂ ನಿರ್ಗಮಿತ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳನ್ನು ಹಾಗೂ ಎಮ್.ಬಿ.ಕೆ, ಎಲ್.ಸಿ.ಆರ್.ಪಿ ಗಳಿಗೆ ಸ್ಮರಣಿಕೆ, ಹೂ ನೀಡಿ ಗೌರವಿಸಲಾಯಿತು.
ಸಭೆಯಲ್ಲಿ 100 ಸದಸ್ಯರು ಭಾಗಿಯಾಗಿದ್ದರು. ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯಾರು, ಅಂಗನವಾಡಿ ಟೀಚರ್ಗಳು, ಎಮ್.ಬಿ.ಕೆ, ಎಲ್.ಸಿ.ಆರ್.ಪಿ, ಕೃಷಿ ಸಖಿ ಪಶುಸಖಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಶ್ರೀಮತಿ ರೂಪಾ ಕೆ ನಿರೂಪಿಸಿದರು. ಶ್ರೀಮತಿ ಪ್ರತಿಭಾ ಎಲ್ಲರನ್ನು ಸ್ವಾಗತಿಸಿದರು. ಶ್ರೀಮತಿ ಕುಸುಮ ಧನ್ಯವಾದವಿತ್ತರು.