23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಉಜಿರೆ : ಮಂಗಳೂರಿನ ಶ್ರೀನಿವಾಸ ಯೂನಿವರ್ಸಿಟಿ ಹಾಗೂ ಸಮೂಹ ಸಂಸ್ಥೆಗಳ ಎ. ಶಾಮ ರಾವ್ ಪೌಂಡೇಶನ್ ವತಿಯಿಂದ ಸಂಸ್ಥಾಪಕರ ದಿನದ ಅಂಗವಾಗಿ ಕೊಡಮಾಡುವ ಎ. ಶಾಮ ರಾವ್ ಸ್ಮಾರಕ ಅವಿಭಜಿತ ದಕ್ಷಿಣಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಇವರು ಮಂಗಳೂರಿನ ಮುಕ್ಕದ ಶ್ರೀನಿವಾಸ ಯೂನಿವರ್ಸಿಟಿಯಲ್ಲಿ ಸ್ವೀಕರಿಸಿದರು.

ಶ್ರೀನಿವಾಸ ಯೂನಿವರ್ಸಿಟಿಯ ಕುಲಪತಿ ಸಿಎ. ರಾಘವೇಂದ್ರ ರಾವ್, ಉಪ ಕುಲಪತಿ ಶ್ರೀನಿವಾಸ ರಾವ್ , ಆಡಳಿತ ಮಂಡಳಿಯ ಟ್ರಸ್ಟಿಗಳಾದ ಎ.ವಿಜಯಲಕ್ಷ್ಮೀ ಆರ್ ರಾವ್ ಹಾಗೂ ಮಿತ್ರಾ ಎಸ್ ರಾವ್ , ಅತಿಥಿಗಳಾದ ಬೆಂಗಳೂರಿನ ರಾಜೀವ ಗಾಂಧಿ ಹೆಲ್ತ್ ಸೈನ್ಸ್ ಇದರ ಸಿಂಡಿಕೇಟ್ ಸದಸ್ಯರಾದ ಯು.ಟಿ ಇಫ್ತಿಕರ್ ಅಲಿ , ಬ್ಯಾಂಕ್ ಆಫ್ ಮಹಾರಾಷ್ಟ್ರ ಇದರ ಕಾರ್ಯ ನಿರ್ವಾಹಕ ನಿರ್ದೇಶಕ ಆಶಿಷ್ ಪಾಂಡೆ , ಮೌಲ್ಯಮಾಪನ ರಿಜಿಸ್ಟ್ರಾರ್ ಶ್ರೀನಿವಾಸ ಮಯ್ಯ , ಪ್ರಶಸ್ತಿ ಆಯ್ಕೆ ಸಮಿತಿಯ ಮುಖ್ಯಸ್ಥ ಡಾ.ಎ.ಆರ್ ಶಬರಾಯ ಮತ್ತಿತರ ಗಣ್ಯರು ಉಪಸ್ಥಿತರಿದ್ದು ಪ್ರಶಸ್ತಿ ನೀಡಿ ಗೌರವಿಸಿದರು.

Related posts

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

Suddi Udaya

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

Suddi Udaya
error: Content is protected !!