ಧರ್ಮಸ್ಥಳ ಗ್ರಾಮ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಇವರ ಜಂಟಿ ಆಶ್ರಯದಲ್ಲಿ ಫೆ.15 ರಂದು ಭಾರತದ 75ನೇ ಸಂವಿಧಾನ ದಿನಾಚರಣೆಯ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಧರ್ಮಸ್ಥಳ ಗ್ರಾಮಕ್ಕೆ ಪ್ರವೇಶಿಸಿದ ಸಂದರ್ಭ ಸಂವಿಧಾನ ಜಾಗೃತಿ ಜಾಥಾವನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿವರ್ಗ, ನರೇಗಾ ತಾಲೂಕು ಐಇಸಿ ಸಂಯೋಜಕರು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಸ್ವಸಹಾಯ ಸಂಘದ ಸದಸ್ಯರು, , ಸರಕಾರಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಭವ್ಯ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು.
ಮಹಾದ್ವಾರದಿಂದ ಧರ್ಮಸ್ಥಳ ಪೇಟೆಯಿಂದ ಭವ್ಯ ಮೆರವಣಿಗೆಯಲ್ಲಿ ಧರ್ಮಸ್ಥಳ ಗ್ರಾಮದ ಎಲ್ಲಾ ಶಾಲೆಯ ಮಕ್ಕಳು , ಎಲ್ಲಾ ಶಾಲೆಯ ಅಧ್ಯಾಪಕವರಿಂದ, ಊರವರು, ಸಂಘ ಸಂಸ್ಥೆಯ ಪ್ರತಿನಿಧಿಗಳು, ಸಂಜೀವಿನಿ ಒಕ್ಕೂಟದವರು, ಸ್ವಸಹಾಯ ಸಂಘದವರು, ಡಿಎಸ್ಎಸ್ ಸಂಘಟನೆಯ ಸದಸ್ಯರು, ಮೆರವಣಿಗೆಯಲ್ಲಿ ಹುಲಿವೇಷ, ವೀರಗಾಸೆ, ಗೌತಮ ಬುದ್ಧ ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಅವರ ವೇಷ ಗಮನ ಸೆಳೆದಿತ್ತು, ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ತಿಳಿಸುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿಮಲಾ ಉಪಾಧ್ಯಕ್ಷ ಪಿ ಶ್ರೀನಿವಾಸ್ ರಾವ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ ಇವರು ಡಾ| ಬಿ ಆರ್ ಅಂಬೇಡ್ಕರ್ ಅವರಿಗೆ ಹಾರ ಹಾಕುವ ಮೂಲಕ ಗ್ರಾಮದ ಗೌರವ ನೀಡಲಾಯಿತು.
ಎಲ್ಲಾ ಊರವರು ಸಂಘ ಸಂಸ್ಥೆಯ ಪ್ರತಿನಿಧಿಗಳು ಅಧಿಕಾರಿ ವರ್ಗದವರು ಡಾ| ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಪುಷ್ಪಾಂಜಲಿಯನ್ನು ಮಾಡಿದರು, ಸಂವಿಧಾನ ಪೀಠಿಕೆಯನ್ನು ಆಶ್ರಮ ಶಾಲೆ, ಧರ್ಮಸ್ಥಳ ಶಾಲಾ ಅಧ್ಯಾಪಕರು ಭೋಧನೆ ಮಾಡಿದರು. ಮಂಗಳೂರಿನ ಕಲಾ ತಂಡದಿಂದ ಸಂವಿಧಾನ ಜಾಗೃತಿ ಕುರಿತು ಗೀತಾ ಗಾಯನ ಹಾಗೂ ಪ್ರಹಸನ ಪ್ರದರ್ಶಿಸಿದರು. ಈ ಪ್ರಯುಕ್ತ ಸಂವಿಧಾನದ ಬಗ್ಗೆ ಶಾಲಾ ಮಕ್ಕಳಿಗೆ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆ, ಚಿತ್ರಕಲೆ, ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮವನ್ನು ಪಂಚಾಯತ್ ಸಿಬ್ಬಂದಿ ಡಾ. ದೇವಿಪ್ರಸಾದ್ ಬೊಲ್ಮ ನಿರೂಪಿಸಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿದರು. ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ ಇವರು ಧನ್ಯವಾದವಿತ್ತರು, ಕಾರ್ಯಕ್ರಮದ ಯಶಸ್ವಿಗೆ ಸಿಬ್ಬಂದಿಗಳು ಸಹಕರಿಸಿದರು.