24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

ನಿಡ್ಲೆ : ರಾಜ್ಯ ಸರಕಾರ ಜಿಲ್ಲಾ ಆಡಳಿತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮ ಪಂಚಾಯತ್ ನಿಡ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆ. 16 ರಂದು ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತ ಗ್ರಾಮಕ್ಕೆ ಆಗಮಿಸಿದ ರಥವನ್ನು ಬರೆಂಗಾಯ ಎಂಬಲ್ಲಿ ಸ್ವಾಗತಿಸಿ ಬೈಕ್ ಜಾಥಾ ಹಾಗೂ ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯದ ಶಾಲಾ ಮಕ್ಕಳು ಬ್ಯಾಂಡ್ ವಾದ್ಯಗಳೊಂದಿಗೆ ಗ್ರಾಮ ಪಂಚಾಯತ್ ಕಛೇರಿವರೆಗೆ ಜಾಥ ಮೂಲಕ ಕರೆತರಲಾಯಿತು.

ಸಂವಿಧಾನ ಜಾಥಾ ರಥದ ಮಹತ್ವವನ್ನು ಸೇರಿದ ವೀಕ್ಷಕರಿಗೆ ವಿವರಿಸಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಸಮಾಜ ಕಲ್ಯಾಣ ಇಲಾಖಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾಧಿಕಾರಿಗಳು, ಶಾಲಾ ಶಿಕ್ಷಕ ವೃಂದ, ಶಾಲಾ ಮಕ್ಕಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖಾಧಿಕಾರಿಗಳು, ಮಹಿಳಾ ಸಂಜೀವಿನಿ ಒಕ್ಕೂಟದ ಸದಸ್ಯರು, ಪಂಚಾಯತ್ ಸಿಬ್ಬಂದಿ ವರ್ಗ, ಬೆಳ್ತಂಗಡಿ ತಾಲೂಕು ಪಂಚಾಯತ್ ನ ವಿನಿಷಾ ರವರು ಭಾಗವಹಿಸಿದ್ದರು.

ಪಂಚಾಯತ್ ಅಭಿವೃಧ್ಧಿ ಅಧಿಕಾರಿಯವರು ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಹೇಮಲತಾ ಸಂವಿಧಾನ ಪ್ರತಿಜ್ಞಾ ವಿಧಿ ಬೋದಿಸಿದರು, ಪಂಚಾಯತ್ ಕಾರ್ಯದರ್ಶಿ ಕೆ.ಪಿ. ಕೇಶವ ಗೌಡ ರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya
error: Content is protected !!