23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಕಾರ್ಯಾಲಯ ಉದ್ಘಾಟನೆ

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಫೆ.17 ರಿಂದ ಪ್ರಾರಂಭಗೊಂಡು ಫೆ.26 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಬೆಳಿಗ್ಗೆ ಕಾರ್ಯಾಲಯ ಉದ್ಘಾಟನೆಯನ್ನು ಶಿಶಿಲ ಸೀಮಾ ಚಿತ್ಪಾವನ ಸಂಘದ ಅಧ್ಯಕ್ಷ ವರದಶಂಕರ ದಾಮ್ಲೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀರಂಗ ದಾಮ್ಲೆ, ಬ್ರಹ್ಮಕಲಶೋತ್ಸವ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಮುರುಳೀಧರ ಶೆಟ್ಟಿಗಾರ್, ಬ್ರಹ್ಮಕಲಶೋತ್ಸವ ಸಮಿತಿ ಸಹ ಸಂಚಾಲಕ ಜಯಪ್ರಸಾದ್ ಶೆಟ್ಟಿಗಾರ್, ಅರ್ಚಕ ಉಲ್ಲಾಸ್ ಭಟ್ ಅಂತರ ಹಾಗೂ ಜೀರ್ಣೋದ್ಧಾರ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷರು,ವೈದಿಕ ಸಮಿತಿಯವರು, ಸದಸ್ಯರು, ಊರವರು ಉಪಸ್ಥಿತರಿದ್ದರು.

ಸಂಜೆ 5.00ಕ್ಕೆ ಋತ್ವಿಜರಿಗೆ ಪೂರ್ಣಕುಂಭ ಸ್ವಾಗತ, ಹಾಗೂ ವೈದಿಕ ಕಾರ್ಯಗಳು ಆಚಾರ್ಯಾದಿ ಋತ್ವಿಕ್ ವರಣ, ತೋರಣ ಮೂಹೂರ್ತ, ಉಗ್ರಾಣ ಮೂಹೂರ್ತ, ಸಪ್ತಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ದಿಶಾ ಬಲಿ ಅಂಕುರಾರೋಪಣ ಹಾಗೂ ಸಂಜೆ 6ಕ್ಕೆ ಉಗ್ರಾಣ ಉದ್ಘಾಟನೆ ಜರುಗಲಿದೆ.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಕವಿ ಮಾಸ್ತಿ ಸಂಸ್ಮರಣೆ

Suddi Udaya

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

Suddi Udaya
error: Content is protected !!