ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

ಕೊಕ್ಕಡ: ಕೊಕ್ಕಡ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಥಾ ರಥವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿರವರು ಹಾಗೂ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಪ್ರಭಾಕರ ನಾಯ್ಕ್ ರವರು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಲಾಯಿತು.

ಶ್ರೀ ರಾಮ ಭಜನಾ ಮಂದಿರ ಕೊಕ್ಕಡ ದ ಬಳಿಯಿಂದ, ಕೊಕ್ಕಡ ಸರಕಾರಿ ಪ್ರೌಢಶಾಲಾ ಮಕ್ಕಳಿಂದ ವಾದ್ಯ ಘೋಷಗಳೊಂದಿಗೆ ಹಾಗೂ ಪೂರ್ಣ ಕುಂಭ ಕಲಶಗಳೊಂದಿಗೆ ಮೆರವಣಿಗೆ ಮೂಲಕ ಕೊಕ್ಕಡ ಅಮೃತ ಗ್ರಾಮ ಪಂಚಾಯುತ್ ವರೆಗೆ ಕರೆತರಲಾಯಿತು.

ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗ, ಐ ಇ ಸಿ ಸಂಯೋಜಕರು ,ತಾಲೂಕು ವಲಯ , ಮೇಲ್ವಿಚಾರಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸರಕಾರಿ ಪ್ರೌಢಶಾಲಾ ಮುಖ್ಯೋಪಾದ್ಯಾಯರು ಸಹಶಿಕ್ಷರು , ಶಾಲಾ ಮಕ್ಕಳು ,ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆ ಯರು ,ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು/ ಪದಾದಿಕಾರಿಗಳು . ಮೇಲ್ವಿಚಾರಕರು ಎಸ್ ಕೆ ಡಿ ಆರ್ ಡಿ ಪಿ ಧರ್ಮಸ್ಥಳ ಕೊಕ್ಕಡ ವಿಭಾಗ ,ಭಾಗವಹಿಸಿದ್ದರು. ಗ್ರಾಮ ಪಂಚಾಯತ್ ಅಬಿವೃದ್ದಿ ಅಧಿಕಾರಿಯವರು ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಬೋದಿಸಿದರು. ಸರಕಾರಿ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ, ಭಾಷಣ ಮತ್ತು ಚಿತ್ರಕಲೆ ಸ್ಪರ್ದೆಯನ್ನು ಏರ್ಪಡಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

Related posts

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜಾತ್ರಾಮಹೋತ್ಸವದ ಸಮಾಲೋಚನಾ ಸಭೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya
error: Content is protected !!