23.6 C
ಪುತ್ತೂರು, ಬೆಳ್ತಂಗಡಿ
May 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

ಬೆಳ್ತಂಗಡಿ : ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಮೇಲೆ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ನೇತೃತ್ವದಲ್ಲಿ ಉಜಿರೆಯ ಲಾಡ್ಜ್‌ ಗಳ ಮೇಲೆ ಫೆ.18 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಉಜಿರೆಯ ನಾಲ್ಕು ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಪೊಲೀಸ್ ಇಲಾಖೆಗೆ ದೂರು ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್‌ ನೇತೃತ್ವದಲ್ಲಿ ಏಳು ಪೊಲೀಸ್ ವಾಹನದಲ್ಲಿ ಏಕಕಾಲದಲ್ಲಿ ಫೆ.18 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು. ಯಾವುದೇ ಅನೈತಿಕ ಚಟುವಟಿಕೆಗಳು ಕಂಡು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಲಾಡ್ಜ್ ಗಳ ಸಿಸಿಕ್ಯಾಮರ ದಾಖಲೆ ಮತ್ತು ಲೆಕ್ಚರ್ ಪುಸ್ತಕ ಪರಿಶೀಲನೆ ನಡೆಸಿ ಎಚ್ಚರಿಕೆ ನೀಡಿದ್ದಾರೆ.

ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್‌ ನೇತೃತ್ವದ ಬಂಟ್ವಾಳ, ಪುಂಜಾಲಕಟ್ಟೆ, ವೇಣೂರು ಪೊಲೀಸರು ತಂಡ ಏಳು ಪೊಲೀಸ್ ವಾಹನದಲ್ಲಿ ಏಕಕಾಲದಲ್ಲಿ ಪೊಲೀಸರು ದಾಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು

Related posts

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಬಳಂಜ : ಮುಜ್ಜಿಮೇರು ಮನೆಯ ಒಬ್ಬು ಪೂಜಾರಿ ನಿಧನ

Suddi Udaya

ಕಡಿರುದ್ಯಾವರ ಕುಕ್ಕಾವು ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya
error: Content is protected !!