ಬೆಳ್ತಂಗಡಿ: ಮೂಲತಃ ಕಾಸರಗೋಡು ಜಿಲ್ಲೆಯ ಕೂಡ್ಲು ನಿವಾಸಿಯಾಗಿರುವ ಅವರಿಗೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು, ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು.
ಉಡುಪಿಯ ಟಿ.ಎಂ.ಪೈ. ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಗಟ್ಟಿ ಅವರು, ಭಾರತ ಸರಕಾರದಿಂದ ಪ್ರಾಧ್ಯಾಪಕರಾಗಿ ಇಥಿಯೋಪಿಯಕ್ಕೆ ಪ್ರಯಾಣ ಬೆಳೆಸಿದ್ದರು. ಇಥಿಯೋಪಿಯದಿಂದ ಹಿಂತಿರುಗಿದ ನಂತರ ಉಜಿರೆಯಲ್ಲಿ ನೆಲೆಸಿದ್ದ ಇವರು ಕೃಷಿಯಲ್ಲಿ ತೊಡಗಿದ್ದರು. ಮೃತರ ಕುಟುಂಬ, ಬಂಧು ಮಿತ್ರರಿಗೆ ದೇವರು ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ; ಅಲ್ಲದೆ ಅವರಿಗೆ ಚಿರಶಾಂತಿಯನ್ನು ಕರುಣಿಸಲಿ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸಂತಾಪ ಸೂಚಿಸಿದರು.