25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ವಿಮಾ ಕ್ಷೇತ್ರದ ಗೌರವ

ಬೆಳ್ತಂಗಡಿ: ಕೇರ್ ಇನ್ಸೂರೆನ್ಸ್ ಕಂಪೆನಿಯ ಅಂತಾರಾಷ್ಟ್ರೀಯ ಸಮ್ಮೇಳನವು ನೆದರ್‌ಲ್ಯಾಂಡನ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ನಡೆಯಿತು. ಈ ಸಮ್ಮೇಳನದಲ್ಲಿ ಕೇರ್ ಇನ್ಸೂರೆನ್ಸ್ ಕಂಪೆನಿಯ ರಿಟೇಲ್ ಬಿಸಿನೆಸ್‌ನಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿದ ಹಾಗೂ ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರಿಗೆ ಕೇರ್ ಇನ್ಸೂರೆನ್ಸ್ ಕಂಪೆನಿಯ ರಾಷ್ಟ್ರೀಯ ಮುಖ್ಯಸ್ಥರಾದ ಶರ್ಮಿಲ್ ಮೋದಿರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. 

ಈ ಸಂದರ್ಭದಲ್ಲಿ ಕೇರ್ ಇನ್ಸೂರೆನ್ಸ್ ಕಂಪೆನಿಯ ವಲಯ ಮುಖ್ಯಸ್ಥ ಜಗದೇವ್ ಸಿಂಗ್, ಹರಿಂದಾಮ್ ಸಿನ್ಹ ಮತ್ತಿತ್ತರರು ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ಸೇವೆಯ ಜೊತೆಗೆ ಆರೋಗ್ಯ ಪೂರ್ಣ ಸ್ವಸ್ಥ ಸಮಾಜ ನಿರ್ಮಾಣಕ್ಕೆ ನಿರಂತರವಾಗಿ ಆರೋಗ್ಯ ಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದೆ. ಸಂಘದ ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಿದ್ದು ಸಂಘವು ಈಗಾಗಲೇ ಒಟ್ಟು 63 ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿದ್ದು, ಈ ಶಿಬಿರಗಳಲ್ಲಿ ಕಡುಬಡವರಿಗೆ ಉಚಿತ ಔಷಧಿ ವಿತರಣೆ, ಆರೋಗ್ಯ ತಪಾಸಣೆ, ದಂತ ತಪಾಸಣೆ ಮತ್ತು ಚಿಕಿತ್ಸೆ, ಉಚಿತ ಆರೋಗ್ಯ ಕಾರ್ಡ್ ವಿತರಣೆ, 400ಕ್ಕೂ ಮಿಕ್ಕಿ ಕಣ್ಣಿನ ಶಸ್ತ್ರಚಿಕಿತ್ಸೆ ಹಾಗೂ 14000ಕ್ಕೂ ಮಿಕ್ಕಿ ಉಚಿತ ಕನ್ನಡಕ ವಿತರಣೆಯನ್ನು ಸಂಘದ ವತಿಯಿಂದ ಮಾಡಲಾಗಿದೆ. ಅಲ್ಲದೇ ವಿಮಾ ಕ್ಷೇತ್ರದ 8ಕ್ಕೂ ಅಧಿಕ ಕಂಪೆನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಆರೋಗ್ಯ, ವಾಹನ ಹಾಗೂ ಜೀವ ವಿಮಾ ಸೇವೆಯನ್ನು ಸಂಘದ ಸದಸ್ಯರಿಗೆ ಸ್ಮರ್ಧಾತಕ ದರದಲ್ಲಿ ನೀಡುತ್ತಾ ಬರುತ್ತಿದ್ದು, ಹೆಚ್ಚಿನ ಗ್ರಾಹಕರು ಇದರ ಪ್ರಯೋಜನವನ್ನು ಪಡೆದಿದ್ದಾರೆ. ಸಂಘವು ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಸತತ 8 ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆದಿರುವ ಸಂಸ್ಥೆಯಾಗಿದೆ.

Related posts

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿ ಡಾ. ಚಂದ್ರಕಾಂತ್ ವರ್ಗಾವಣೆ

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

Suddi Udaya
error: Content is protected !!