July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಹಕಾರ ರತ್ನ ನಿರಂಜನ್ ಬಾವಂತಬೆಟ್ಟು ರವರಿಗೆ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ನುಡಿ ನಮನ

ಬೆಳ್ತಂಗಡಿ : ಇತ್ತೀಚೆಗೆ ನಿಧನರಾದ ಸಹಕಾರ ಕ್ಷೇತ್ರದಲ್ಲಿ ಸಾಧನೆ ಗೈದು ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ನಿರಂಜನ್ ಬಾವಂತಬೆಟ್ಟು ಇವರಿಗೆ ಅವರ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ಶ್ರದ್ಧಾಂಜಲಿ ಮತ್ತು ನುಡಿ ನಮನ ಫೆ.19 ರಂದು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಬೆಳ್ತಂಗಡಿ ಶಾಖೆಯ ಸಭಾ ಭವನದಲ್ಲಿ ಜರಗಿತು.

ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ರಾಜಶ್ರೀ ಹೆಗ್ಡೆ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರು, ಮುಂಡಾಜೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ನುಡಿನಮನ ಸಲ್ಲಿಸಿ ನಿರಂಜನ್ ರವರು ಸಹಕಾರಿ ಕ್ಷೇತ್ರ ಮತ್ತು ರಾಜಕೀಯ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಸೇವೆಯ ಬಗ್ಗೆ ಮಾತನಾಡಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಜಿರೆ ಸಹಕಾರ ಸಂಘದ ಅಧ್ಯಕ್ಷ ಇ. ಸುಂದರ ಗೌಡ, ಎಲ್. ಡಿ. ಬ್ಯಾಂಕ್ ಮಾಜಿ ಅಧ್ಯಕ್ಷ ಈಶ್ವರ ಭಟ್ ಮಾಯಿಲ್ತೊಡಿ, ತಾಲೂಕಿನ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳು, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಿವಿಧ ಶಾಖೆಗಳ ವ್ಯವಸ್ಥಾಪಕರು, ಸಿಬ್ಬಂದಿಗಳು, ಅಭಿಮಾನಿಗಳು ಹಾಜರಿದ್ದರು.

ಪತ್ರಕರ್ತ ದೇವಿ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Related posts

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

Suddi Udaya

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

Suddi Udaya

ನಾಲ್ಕೂರು: ಸಿದ್ದಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕೊಲ್ಪಾಡಿ ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಬಳಂಜ ಆನೆಪಿಲ ರಸ್ತೆಯ ಅಭಿವೃದ್ಧಿಗೆ ರಕ್ಷಿತ್ ಶಿವರಾಮ್ ರವರಿಂದ ಅನುದಾನ ನೀಡುವ ಭರವಸೆ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya
error: Content is protected !!