April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ.19 ರಂದು ವೈದಿಕ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಸಭೆಯು ನಡೆಯಿತು.

ಬೆಳಿಗ್ಗೆ ಶಿಬಾಜೆ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ಹಾಗೂ ಸಂಜೆ ಶಿಶಿಲ ಶ್ರೀ ಮತ್ಸ್ಯ ಶಿವದುರ್ಗಾ ಭಜನಾ ಮಂಡಳಿ , ಕೊಕ್ಕಡ ಶ್ರೀ ವೈದ್ಯನಾಥೇಶ್ವರ ಭಜನಾ ಮಂಡಳಿ ಕೊಕ್ಕಡ ಶ್ರೀ ಭಜನಾಂತರಂಗ ದರ್ಭೆತ್ತಡ್ಕ ಇವರಿಂದ ಭಜನಾ ಕಾರ್ಯಕ್ರಮಗಳು ನಡೆಯಿತು.

ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಗಾಯತ್ರಿ ನಾಳಾಲು ಅಧ್ಯಕ್ಷತೆಯನ್ನು ವಹಿಸಿದರು. ನಾವೂರು ಆರೋಗ್ಯ ಕ್ಲಿನಿಕ್ ಡಾ| ಪ್ರದೀಪ ಆಟಿಕುಕ್ಕೆ ಧರ್ಮಸಂದೇಶವನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಶಿಶಿಲ ಗ್ರಾ.ಪಂ. ಅಧ್ಯಕ್ಷ ಸುದಿನ್ ಡಿ. ಶಿಶಿಲ, ಶಿಬಾಜೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರತ್ನಾ ಪತ್ತಿಮಾರು, ಅರಸಿನಮಕ್ಕಿ ತಾ.ಪಂ. ಮಾಜಿ ಸದಸ್ಯ ವಾಮನ ತಾಮ್ಹನ್ ಕರ್, ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ ರಾವ್, ಕೊಕ್ಕಡ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಬೇಬಿ, ಶಿಶಿಲ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ, ಶಿಬಾಜೆ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ರತೀಶ್ ಗೌಡ ಬೇಂಗಳ, ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕ ಜಯರಾಮ ನೆಲ್ಲಿತ್ತಾಯ ಉಪಸ್ಥಿತರಿದ್ದರು.

ಮಮತಾ, ಧನವತಿ, ನಯನ ಪ್ರಾರ್ಥಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀರಂಗ ದಾಮ್ಲೆ ಸ್ವಾಗತಿಸಿ, ಶ್ರೀಮತಿ ರೇಣುಕಾ ಸುಧೀರ್ ಕುಮಾರ್ ಎಮ್.ಎಸ್. ಕಾರ್ಯಕ್ರಮ ನಿರೂಪಿಸಿದರು. ಮಾಧ್ಯಮ ಮತ್ತು ಪ್ರಚಾರ ಸಹಸಂಚಾಲಕ ಗಣೇಶ್ ಹೊಸ್ತೋಟ ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಶ್ರೀ ರಾಘವೇಂದ್ರ ಕಿಗ್ಗ ಮತ್ತು ಬಳಗ ಶೃಂಗೇರಿ ಇವರಿಂದ ಭಕ್ತಿ ಸಂಗೀತ ಹಾಗೂ ರಾತ್ರಿ ಮೂರು ಮುತ್ತು ಹಾಸ್ಯಮಯ ನಾಟಕ ಜರುಗಿತು.

Related posts

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya

ನಾವೂರು ಗ್ರಾ.ಪಂ ನೂತನ ಕಟ್ಟಡ ಪ್ರಜಾ ಸೌಧ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ -ಉದ್ಘಾಟನೆ

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya
error: Content is protected !!