April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಪ್ರಕರಣ ಮರು ತನಿಖೆ ಕೋರಿದ ಅರ್ಜಿ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

ಬೆಳ್ತಂಗಡಿ: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿದ ಅರ್ಜಿ ಸಂಬಂಧ ರಾಜ್ಯ ಸರಕಾರ ಮತ್ತು ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಈ ಕುರಿತಂತೆ ಚಂದಪ್ಪ ಗೌಡ ಸಲ್ಲಿಸಿದ್ದ ತಕರಾರು ಅರ್ಜಿಯು ನ್ಯಾ| ಕೆ.ನಟರಾಜನ್ ಅವರ ನ್ಯಾಯಪೀಠದ ಮುಂದೆ ಇತ್ತೀಚೆಗೆ ವಿಚಾರಣೆಗೆ ಬಂದಿತ್ತು. ಸ್ವಲ್ಪಹೊತ್ತು ಅರ್ಜಿದಾರರ ಪರವಕೀಲರವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿ. ಜಿಪಿ, ದ.ಕ. ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಬೆಳ್ತಂಗಡಿ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್‌ ಜಾರಿಗೊಳಿಸಿತು.

ಅಲ್ಲದೆ, ಪ್ರಕರಣದಿಂದ ಸಂತೋಷ್ ರಾವ್ ಅನ್ನು ಖುಲಾಸೆಗೊಳಿಸಿ ವಿಚಾರಣ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಇದರೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಸೂಕ್ತ ವಿಭಾಗೀಯನ್ಯಾಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ಸೂಚಿಸಿತು. ಖುಲಾಸೆಯಾಗಿರುವ ಸಂತೋಷ್ ರಾವ್ ಅನ್ನೂ ಪ್ರತಿವಾದಿ ಮಾಡಲಾಗಿದೆ.

Related posts

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya
error: Content is protected !!