28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

ಮಚ್ಚಿನ: ಇಲ್ಲಿಯ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿಯಿಂದ ಆರು ಮಂದಿ ಗಾಯಗೊಂಡಿದ್ದು, ಗಂಭೀರ ಗಾಯಗೊಂಡ‌ ಓವ೯ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇಂದು ಬೆಳಗ್ಗೆ ಮಚ್ಚಿನ ಕೊಡಿಯೇಲು‌ ಕೊರೆಗೆ ತಿರುಗುವ‌ ರಸ್ತೆ ಬಳಿಯಲ್ಲಿ ಮರದಲ್ಲಿ ಇದ್ದ ಹೆಜ್ಜೇನು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ದಾಳಿ ನಡೆಸಿದೆ. ಇದರಿಂದಾಗಿ ಕೊರೆಗೆ ಕೆಲಸಕ್ಕೆ ಹೋಗುತ್ತಿದ್ದ ನಾಲ್ವರು ಕಾರ್ಮಿಕರು, ಬಳ್ಳಮಂಜ ಮೀನು ಮಾರುಕಟ್ಟೆಗೆ ಕೆಲಸಕ್ಕೆ ಬರುತ್ತಿದ್ದ ಯುವಕ ಸೇರಿದಂತೆ ಆರು ಮಂದಿಗೆ ಹೆಜ್ಜೇನು ಕಚ್ಚಿದೆ.


‌ಬಳ್ಳಮಂಜ ಮೀನು ಮಾರುಕಟ್ಟೆಗೆ ಕೆಲಸಕ್ಕೆ ಬರುತ್ತಿದ್ದ ಯುವಕನಿಗೆ ಹೆಚ್ಚು ಗಾಯವಾಗಿದ್ದು, ಆತನನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ನೀಡಿ,‌ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಜ್ಜೇನು ದಾಳಿಗೆ ಒಳಗಾದ ಒಬ್ಬರು ‌ವಾಟ್ಸಪ್ ನಲ್ಲಿ ವಾಯ್ಸ್ ಮೆಸೇಜ್ ಹಾಕಿ ಆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿರುವವರಿಗೆ ಎಚ್ಚರಿಕೆ ನೀಡುವ ಕಾಯ೯ವನ್ನು ಮಾಡಿದರು.

Related posts

ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!