April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

ವೇಣೂರು: ವೇಣೂರು ಭಗವಾನ್ ಬಾಹುಬಲಿಗೆ 12 ವರ್ಷದ ಬಳಿಕ ಫೆ  22 ರಿಂದ ಮಾ 1 ರವರೆಗೆ  ಶತಮಾನದ  3 ನೇ ಮಹಾಮಸ್ತಕಾಭಿಷೇಕ ಮಹೋತ್ಸವವು  ವಿವಿಧ  ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದ್ದು, ಫೆ. 22ರಂದು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಸಂಜೆ ನಡೆದ ಸಮಾರಂಭದಲ್ಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಉದ್ಘಾಟನೆಯನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ 108 ಶ್ರೀ ಅಮೋಘಕೀರ್ತಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮಹಾರಾಜರು ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ, ಮೂಡುಬಿದಿರೆ, ಶ್ರವಣಬೆಳಗೊಳ ಜೈನಮಠ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳು, ಹಾರಿಕಾ‌ಮಾತಾಜಿ, ಕ್ಷುಲಿಕಾ ಮಾತಾಜಿ ಪಾವನ ಸಾನ್ನಿಧ್ಯ ವಹಿಸಿ, ಆಶೀರ್ವದಿಸಿದರು.

ಸಂಜೆ ನಡೆದ ಸಮಾರಂಭದಲ್ಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಉದ್ಘಾಟನೆಯನ್ನು ಧಮ೯ಸ್ಥಳದ ಧಮಾ೯ಧಿಕಾರಿ ಡಾ.ವೀರೇಂದ್ರ‌ ಹೆಗ್ಗಡೆಯವರು ದೀಪ ಬೆಳಗಿಸಿ ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಅಳದಂಗಡಿ ಅರಮನೆಯ ಸ್ಥಾಪಕ ವಂಶಿಯ ಅರಸರು ಮತ್ತು ಕಾರ್ಯಾಧ್ಯಕ್ಷರು ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಗೌರವ ಉಪಸ್ಥಿತರಿದ್ದರು.


‌ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ,
ವೇಣೂರು ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ್, ಮಹಾಮಸ್ತಕಾಭಿಷೇಕ ಸಮಿತಿ ಪ್ರಧಾನ ಸಂಚಾಲಕ ಡಿ.ಹಷೇ೯ಂದ್ರ‌‌ಕುಮಾರ್ , ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ , ಕೋಶಾಧಿಕಾರಿ ಜಯರಾಜ್ ಕಂಬಳಿ
ಉಪಸ್ಥಿತರಿದ್ದರು.

ಶ್ರೀಮತಿ ಪದ್ಮಾವತಿ ಬಳೆಂಜ ಪ್ರಾರ್ಥಿಸಿ, ಡಾ| ಪದ್ಮಪ್ರಸಾದ್ ಅಜಿಲರು ಸ್ವಾಗತಿಸಿದರು. ಮೂಡಬಿದ್ರೆ ವಿಶ್ರಾಂತ ಮುಖ್ಯೋಪಾಧ್ಯಾಯರು ಮುನಿರಾಜ ರೆಂಜಾಳ ಕಾರ್ಯಕ್ರಮ ನಿರೂಪಿಸಿದರು. ಶಿವಪ್ರಸಾದ್ ಅಜಿಲರು ಧನ್ಯವಾದವಿತ್ತರು.

ಧಾರ್ಮಿಕ ವಿಧಿ ವಿಧಾನಗಳು ಆರಂಭ:
ಯುಗಳ ಮುನಿಶ್ರೀಗಳಾದ ಪರಮಪೂಜ್ಯ ಶ್ರೀ ಅಮೋಘ ಕೀರ್ತಿ ಮುನಿ ಮಹಾರಾಜ ಹಾಗೂ ಶ್ರೀ ಅಮರ ಕೀರ್ತಿ ಮುನಿ ಮಹಾರಾಜ, ನರಸಿಂಹರಾಜಪುರ ಜೈನ ಮಠದ ಡಾ.ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ, ಲಕ್ಕವಳ್ಳಿ ಜೈನ ಮಠದ ಶ್ರೀ ವೃಷಭಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಅವರ ಸಾನಿಧ್ಯದಲ್ಲಿ ನಿತ್ಯ ವಿಧಿ ಸಹಿತ ಮೃತ್ತಿಕಾ ಸಂಗ್ರಹಣ, ಅಂಕುರಾರ್ಪಣೆ, ಪಂಚ ಕಲ್ಯಾಣ ಮಂಟಪ ಪ್ರವೇಶ, ಯಕ್ಷರಾಧನಾ ಪೂರ್ವಕ ಯಕ್ಷ ಪ್ರತಿಷ್ಠೆ, ಮಧ್ಯಾಹ್ನ ಧ್ವಜಾರೋಹಣ, ಸಂಜೆ ಬ್ರಹ್ಮಸ್ಥಂಭದ ಬ್ರಹ್ಮ ಯಕ್ಷ ಪ್ರತಿಷ್ಠೆ, ಅಗ್ರೋದಕ ಮೆರವಣಿಗೆ ಸಹಿತ 108 ಕಲಶಗಳಿಂದ ಮಹಾಮಸ್ತಕಾಭಿಷೇಕ ಮೊದಲಾದ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ.

Related posts

ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ವತಿಯಿಂದ ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!