ಶಿಬಾಜೆ: ಇಲ್ಲಿಯ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಫೆ.27ರಿಂದ 29ರವರೆಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಫೆ.27 ಸಂಜೆ 7.00 ಕ್ಕೆ ತೋರಣ ಮುಹೂರ್ತ , ರಾತ್ರಿ 7.30ಕ್ಕೆ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಪೂಜಾ ಬಲಿ.
ಫೆ.28 ಬೆಳಿಗ್ಗೆ ಗಂಟೆ 9ಕ್ಕೆ ಹೊರೆಕಾಣಿಕೆ ಸಮರ್ಪಣೆ, ಮಹಾಗಣಪತಿ ಹೋಮ ಸ್ವಸ್ತಿ ಪುಣ್ಯಾಹ ವಾಚನ, ಬಿಂಬ ಶುದ್ಧಿ, ಕಲಶ ಪೂಜೆ, ಚಂಡಿಕಾ ಹೋಮ, ಪೂರ್ವಾಹ್ನ ಗಂಟೆ 11.00ಕ್ಕೆ ಪೂರ್ಣಾಹುತಿ, ಸುವಾಸಿನಿ ಪೂಜೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ರಾತ್ರಿ ಗಂಟೆ 8ಕ್ಕೆ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಕಟ್ಟೆ ಪೂಜೆಗಳು ಅಶ್ವಥ ಕಟ್ಟೆ ಉತ್ಸವ ನಡೆಯಲಿದೆ.
ಮಾ.29 ರಂದು ಬೆಳಿಗ್ಗೆ ಕಲಶ ಪೂಜೆ ಗಂಟೆ 9ಕ್ಕೆ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ ಗಂಟೆ 8ಕ್ಕೆ ರಂಗಪೂಜೆ (ಗಣಪತಿ ಮತ್ತು ದೇವಿ ಸನ್ನಿಧಿಯಲ್ಲಿ) ನಡೆಯಲಿದೆ. ಹಾಗೂ ಫೆ.28ರಿಂದ 29 ರವರೆಗೆ ಸುದ್ದಿ ಉದಯ ಬೆಳ್ತಂಗಡಿ ಯೂಟ್ಯೂಬ್ ಚಾನಲ್ ನಲ್ಲಿ ಕಾರ್ಯಕ್ರಮದ ನೇರಪ್ರಸಾರಗೊಳ್ಳಲಿದೆ.