24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

ಶಿರ್ಲಾಲು : ಶಿರ್ಲಾಲು ಯುವವಾಹಿನಿಯ ಪದ ಪ್ರದಾನ ಕಾರ್ಯಕ್ರಮವು ಊರ ಸದಾಶಿವ ಪೂಜಾರಿ ಇವರ ಮನೆಯಲ್ಲಿ ನಡೆಯಿತು.

ಮುಖ್ಯಅತಿಥಿಗಳಾಗಿ ಬೆಳ್ತಂಗಡಿ ಯುವವಾಹಿನಿ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಅಶ್ವಥ್ ಕುಮಾರ್ ಮಾತನಾಡಿ ಶಿರ್ಲಾಲು ಯುವಾವಾಹಿನಿ ಸಂಚಲನ ಸಮಿತಿ ಸಮಾಜಮುಖಿ ಕೆಲಸಗಳ ಮೂಲಕ ತಾಲೂಕಿಗೆ ಮದರಿಯಾಗುವ ರೀತಿಯಲ್ಲಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬಂದಿರುವುದು ನಮಗೆಲ್ಲಾ ಹೆಮ್ಮೆಯ ವಿಷಯ ಇನ್ನೂ ಮುಂದೆಯೂ ಹೊಸ ಸಮಿತಿ ಇನ್ನಷ್ಟು ಸಮಾಜಮುಖಿ ಕೆಲಸಕಾರ್ಯಗಳನ್ನು ಮಾಡುವಂತಗಲಿ ನಮ್ಮ ಸಹಕಾರ ಸದಾ ಇದೆ ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾಶಿವ ಊರ ನೂತನ ಪದಾಧಿಕಾರಿಗಳನ್ನು ಗೌರವಿಸಿ ಸಂಘಟನೆಯ ಬಗ್ಗೆ ಮಾಹಿತಿ ನೀಡಿ ಶುಭಕೋರಿದರು.

ಈ ಸಂದರ್ಭದಲ್ಲಿ ಒಂದು ವರ್ಷದ ಅವಧಿಯಲ್ಲಿ ಸಂಚಲನ ಸಮಿತಿಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ ನಿಕಟಪೂರ್ವ ಅಧ್ಯಕ್ಷ ಜಯಕುಮಾರ್ ಇವರಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘ ಸಂಸ್ಥೆಯಿಂದ ಗೌರವಾರ್ಪಣೆ ಮಾಡಲಾಯಿತು. ವೇದಿಕೆಯಲ್ಲಿ ಯುವವಾಹಿನಿ ಸಂಚಲನ ಸಮಿತಿಯ ನಿಯೋಜಿತ ಅಧ್ಯಕ್ಷ ಸನತ್ ಕುಮಾರ್ ಪಿಜಾಕೋಡಂಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಕೋಟ್ಯಾನ್ ಪಾಲನೆ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಹರೀಶ್ ಕಲ್ಲಾಜೆ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷ ಕುಶಲಾ ರಮೇಶ್ ಪೂಜಾರಿ ಉಪಸ್ಥಿತರಿದ್ದರು.

ಸಾಮೂಹಿಕ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವು ಜ್ಞಾನೇಶ್ ಕುಮಾರ್ ಕಟ್ಟ ಇವರು ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸಂಚಲನ ಸಮಿತಿಯ ಕಾರ್ಯದರ್ಶಿ ಯತೀಶ್ ಕರಂಬಾರು ವಾರ್ಷಿಕ ವರದಿ ಮಂಡನೆ ಮಾಡಿದರು. ವಿಜಯ್ ಕುಮಾರ್ ಹೇಡ್ಯದಡ್ಡ ಕಾರ್ಯಕ್ರಮ ನಿರೂಪಿಸಿದರು. ಸಮಿತಿಯ ಪದಾಧಿಕಾರಿಗಳು ಸಹಕಾರ ನೀಡಿದರು. ಪುರಂದರ ಕಟ್ರಬೈಲ್ ಧನ್ಯವಾದವಿತ್ತರು.

Related posts

ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ

Suddi Udaya

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya

ಬಾರ್ಯ: ಶ್ರೀ ಮಹಾವಿಷ್ಣುಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya
error: Content is protected !!