26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ಸ್ , ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಸ್ಕೌಟ್ ಗೈಡ್ ಸಂಸ್ಥಾಪಕರ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಿದರು.

ಮಕ್ಕಳ ಪೋಷಕರ ಹಾಗೂ ಶಿಕ್ಷಕರ ಮಧುಮೇಹ ಹಾಗೂ ರಕ್ತದೊತ್ತಡವನ್ನು ಉಚಿತವಾಗಿ ಪರೀಕ್ಷಿಸಿದರು. ಸುಮಾರು ನೂರಕ್ಕೂ ಅಧಿಕ ಪೋಷಕರು ಇದರ ಸಹಕಾರವನ್ನು ಪಡೆದುಕೊಂಡರು. ನಂತರ ಸರ್ವಧರ್ಮ ಪ್ರಾರ್ಥನೆಯ ಮೂಲಕ ಭಾವೈಕ್ಯತೆಯನ್ನು ಸಾರಿದರು. ತಾಲೂಕು ಆರೋಗ್ಯ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿದರು. ಬೆಳ್ತಂಗಡಿ ಉದಯ ನಗರ ಸುದೆಮುಗೇರಿನಲ್ಲಿರುವ‌ ಅನುಗ್ರಹ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಹಣ್ಣು ಹಂಪಲು ಹಾಗೂ ಸಿಹಿಯನ್ನು ನೀಡಿ ವೃದ್ಧರೊಂದಿಗೆ ಸಮಯವನ್ನು ಕಳೆದರು. ಲಾಯಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡು ಬಡ ಕುಟುಂಬಗಳನ್ನು ಗುರುತಿಸಿ 52 ಕೆಜಿ ಅಕ್ಕಿಯನ್ನು ನೀಡಿದರು.


ಚಿಂತನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳಾದ ಶರತ್ ಶೆಟ್ಟಿ, ಗಣೇಶ್ ಲಾಯಿಲ ಭಾಗವಹಿಸಿದ್ದರು. ಮಕ್ಕಳು ತನಗೆ ಹೆತ್ತವರು ನೀಡಿದ ಪಾಕೆಟ್ ಹಣದ ಉಳಿಕೆಯಿಂದ ಈ ಕಾರ್ಯಗಳನ್ನೆಲ್ಲ ಸಾಧಿಸಲು ಸಾಧ್ಯವಾಯಿತು . ಸಮಾಜಕ್ಕೆ ತನ್ನ ಸೇವೆ, ಸಹಕಾರದಿಂದ ಸಹಬಾಳ್ವೆ ಎಂಬ ವಿಷಯವನ್ನು ಅರಿತುಕೊಂಡರು. ಜಿಲ್ಲಾ ಸಂಸ್ಥೆಯಿಂದ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ಭಾಗವಹಿಸಿ ವಿಭಿನ್ನ ರೀತಿಯ ಚಿಂತನಾ ದಿನಾಚರಣೆಯ ಆಯೋಜನೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನಡೆಯುವ ಚಟುವಟಿಕೆಗಳ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು. ಗೈಡ್ ವಿದ್ಯಾರ್ಥಿಗಳಾದ ಪ್ರಾಪ್ತಿ ವಿ ಶೆಟ್ಟಿ ಹಾಗೂ ಸಿಂಚನ ನಿರೂಪಿಸಿದ ಕಾರ್ಯಕ್ರಮದಲ್ಲಿ ಗೈಡ್ ವಿದ್ಯಾರ್ಥಿ ಪ್ರಷ್ಯಾ ಸ್ವಾಗತಿಸಿ, ಶ್ರುತಾ ಶೆಟ್ಟಿ ವಂದಿಸಿದರು. ಸ್ಕೌಟ್ ಮಾಸ್ಟರ್ ಮಂಜುನಾಥ್ ಸಹಕರಿಸಿದರು. ಸಂಯೋಜಕ ಶಿಕ್ಷಕಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿ, ಯಶಸ್ವಿಗೊಳಿಸಿದರು.

Related posts

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
error: Content is protected !!