September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ : ದ್ವಿಚಕ್ರ ವಾಹನದಿಂದ ಮಹಿಳೆ ರಸ್ತೆಗೆ ಎಸೆಯಲ್ಪಟ್ಟು ಬಿದ್ದು ತಲೆಗೆ ತೀವ್ರ ಗಾಯಗೊಂಡ ಘಟನೆ ಫೆ.23 ರಂದು ವರದಿಯಾಗಿದೆ.ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ (45ವ) ಗಾಯಗೊಂಡು ಮಂಗಳೂರು ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫೆ 23ರಂದು ಬೆಳಿಗ್ಗೆ, ಕಮಲ ರವರು ಕೆಎ21ಎಸ್‌ 7593ನೇ ದ್ವಿಚಕ್ರ ವಾಹನದಲ್ಲಿ ಸಹಸವಾರೆಯಾಗಿ ಹಾಗೂ ಸಂತೋಷ್‌ ಎಂಬವರು ಸವಾರರಾಗಿ ಪ್ರಯಾಣಿಸುತ್ತಾ, ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ತಲುಪಿದಾಗ, ದ್ವಿಚಕ್ರ ವಾಹನವನ್ನು ಸಂತೋಷ್‌ ರವರು ದುಡುಕುತನದಿಂದ ಚಲಾಯಿಸಿದ ಪರಿಣಾಮ, ಸಹಸವಾರೆ ಕಮಲರವರು ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಬಿದ್ದು ತಲೆಗೆ ತೀವ್ರ ಸ್ವರೂಪದ ಗಾಯಗೊಂಡಿರುವುದಲ್ಲದೆ, ದ್ಚಿಚಕ್ರ ವಾಹನ ಸವಾರ ಸಂತೊಷ್‌ ರವರು ಚಾಲನಾ ನಿಯಂತ್ರಣ ತಪ್ಪಿ ವಾಹನ ಸಮೇತ ರಸ್ತೆಯ ಬದಿಯಲ್ಲಿರುವ ಚರಂಡಿಗೆ ಬಿದ್ದು ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ತೀವ್ರ ಸ್ವರೂಪದ ಗಾಯಗೊಂಡ ಸಹಸವಾರೆ ಕಮಲ ರವರನ್ನು ಚಿಕಿತ್ಸೆಯ ಬಗ್ಗೆ ಉಜಿರೆ ಎಸ್‌ಡಿಎಂ ಆಸ್ಪತ್ರೆಗೆ ಕರೆದುಕೊಂಡು ಬಂದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಎಜೆ ಆಸ್ಪತ್ರೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿರುವುದಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 23/2024 ಕಲಂ: 279,338 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಗೆ ಸತತ ಐದನೇ ಬಾರಿ ಶೇ.100 ಫಲಿತಾಂಶ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಧರ್ಮಸ್ಥಳ ಕಾಮಧೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ

Suddi Udaya

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya
error: Content is protected !!