ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ.24ರಂದು ವೈದಿಕ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಸಭೆಯು ನಡೆಯಿತು.
ಬೆಳಿಗ್ಗೆ ತತ್ವ ಹೋಮ, ತತ್ವ ಕಲಶ ಪೂಜೆ, ಮಹಾಪೂಜೆ. ಕುಂಭೇಶ ಕರ್ಕರಿ ಕಲಶ ಪೂಜೆ, ಕೊಕ್ಕಡ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಬ್ರಹ್ಮಕಲಶ ಪೂಜೆ, ದ್ರವ್ಯ ಕಲಶ ಪೂಜೆ, ಪರಿಕಲಶ ಪೂಜೆ, ಅಧಿವಾಸ ಹೋಮಗಳು, ಕಲಶಾಧಿವಾಸ ನಡೆಯಿತು.ಸಂಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಪೆರ್ಲ , ಶ್ರೀ ಶಬರಿ ಭಜನಾ ಮಂಡಳಿ ತೋಟತ್ತಾಡಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀ ಬಾರ್ಕುರು ಮಹಾಸಂಸ್ಥಾನ ಪೀಠಾಧ್ಯಕ್ಷರಾದ ಶ್ರೀ ಶ್ರೀ ವಿದ್ಯಾ ವಾಚಸ್ಪತಿ ಡಾ. ವಿಶ್ವಸಂತೋಷ ಭಾರತಿ ಶ್ರೀಪಾದರು ಆಶೀರ್ವಚನ ನೀಡಿದರು.ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀರಂಗ ದಾಮ್ಲೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್ ಸಿಂಹ ನಾಯಕ್, ಬೆಂಗಳೂರು ಆರ್. ಟಿ. ಒ. ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಆಗಮಿಸಿದ್ದರು.
ವೇದಿಕೆಯಲ್ಲಿ ಪ್ರಗತಿಪರ ಕೃಷಿಕರಾದ ಶ್ರೀರಮಣ ಭಟ್ ಪಿಲಿಕ್ಕಬೆ, ಎಸ್. ಸಿ. ಡಿ. ಸಿ. ಸಿ. ಬ್ಯಾಂಕ್ ಮುಖ್ಯ ವ್ಯವಸ್ಥಾಪಕರಾದ ಎಂ. ಶ್ರೀಕರ ರಾವ್ ಅಡ್ಕಾರಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಜಯರಾಮ ನೆಲ್ಲಿತ್ತಾಯ, ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಕೇಶವ ರಾವ್ ನೆಕ್ಕಿಲು, ಮಾಧ್ಯಮ ಮತ್ತು ಪ್ರಚಾರ ಸಮಿತಿ ಸಂಚಾಲಕ ವೃಶಾಂಕ್ ಖಾಡಿಲ್ಕರ್,ಮಹಿಳಾ ಸಮಿತಿ ಸಹ ಸಂಚಾಲಕಿ ಸರೋಜಿನಿ ನಾಯ್ಕ್, ನೀರಾವರಿ ಮತ್ತು ಬೆಳಕಿನ ವ್ಯವಸ್ಥೆ ಸಮಿತಿ ಸಂಚಾಲಕ ಹರೀಶ್ಚಂದ್ರ ಶೆಟ್ಟಿಗಾರ್ ಉಪಸ್ಥಿತರಿದ್ದರು.
ಸ್ವಾಗತ ಸಮಿತಿ ಸಂಚಾಲಕ ವಾಮನ ತಾಮ್ಹನ್ ಕರ್ ಸ್ವಾಗತಿಸಿದರು. ಅಂಜನಾ ಜೆ. ರಾವ್ ಹಾಗೂ ಕೀರ್ತನಾ ಜೆ. ರಾವ್ ಪ್ರಾರ್ಥಿಸಿದರು. ಸಭೆ ಮತ್ತು ಸಾಂಸ್ಕೃತಿಕ ಸಮಿತಿ ಸಂಚಾಲಕಿ ಅನುರಾಧಾ ಕೆ. ರಾವ್ ಕಾರ್ಯಕ್ರಮ ನಿರೂಪಿಸಿದರು.ರಾತ್ರಿ ಶ್ರೀ ವಿದ್ಯಾಭೂಷಣ ಬೆಂಗಳೂರು ಇವರಿಂದ ಭಕ್ತಿ ಗಾನಸುಧೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.