25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

ಮಚ್ಚಿನ : ಸುಮಾರು 9 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ಇವರ ಬೀಳ್ಕೊಡುಗೆ ಸಮಾರಂಭವು ಫೆ. 24 ರಂದು ಮಚ್ಚಿನ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಮೋದ್ ಕುಮಾರ್, ಜಯಪ್ರಕಾಶ್ ಸಂಪಿಗೆತ್ತಾಯ, ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್, ಪೋಷಕರ ಸಮಿತಿಯ ಅಧ್ಯಕ್ಷರಾದ ಸುಮಲತಾ, ಮಾಜಿ ಅಧ್ಯಕ್ಷ ಪರಮೇಶ್ವರ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಪ್ರಮೀಳಾ ಅಗ್ನೇಸ್ ಲೋಬೊ, ಪೋಷಕ ಸಮಿತಿಯ ಸದಸ್ಯರಾದ ಹನೀಪ್ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕರು ಹಾಗೂ ಮಕ್ಕಳು ತಮ್ಮ ಶಿಕ್ಷಕರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಶಾಲಾ ಪರವಾಗಿ ಶಿಕ್ಷಕರು, ಶಾಲಾ ಪೋಷಕರ ಸಮಿತಿ, ಚಾಲಕರ, ಬಿಲ್ಲವ ವೇದಿಕೆ ಬಳ್ಳಮಂಜ ಮತ್ತು ಅಡುಗೆ ಸಿಬ್ಬಂದಿಗಳ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಸನ್ಮಾನ ಸ್ವೀಕರಿಸಿದ ವಿಠಲ್ ಬಿ ಮಾತನಾಡಿ ಶಾಲೆಯ ಅಭಿವೃದ್ಧಿಗೆ ನನ್ನೊಂದಿಗೆ ಸಹಕರಿಸಿದ ಪೋಷಕರಿಗೆ ಹಾಗೂ ಊರವರಿಗೆ ಕೃತಜ್ಞತೆ ಸಲ್ಲಿಸಿದರು. ಶಾಲಾ ಮಕ್ಕಳಿಗೆ ಬುದ್ಧಿ ಮಾತುಗಳನ್ನು ಹೇಳಿ ತಮ್ಮ ಮುಂದಿನ ವಿದ್ಯಾಭ್ಯಾಸವು ಈ ಶಾಲೆಯ ಹೆಸರು ಕೀರ್ತಿಯನ್ನು ತರುವಂತಾಗಲಿ ಎಂದು ಶುಭ ಹಾರೈಸಿದರು.

ಶಾಲಾ ಶಿಕ್ಷಕ ರಮೇಶ್ ಪ್ರಸ್ತಾವಿಕ ಮಾತನಾಡಿದರು. ಶಿಕ್ಷಕಿ ದಿವ್ಯ ಸ್ವಾಗತಿಸಿ, ಕಾರ್ಯಕ್ರಮವನ್ನು ಶಿಕ್ಷಕಿ ಮಮತಾ ನಿರೂಪಿಸಿದರು. ಶಿಕ್ಷಕಿ ಸುನಿತಾ. ಬಿ ಧನ್ಯವಾದವಿತ್ತರು. ಮಕ್ಕಳ ಪೋಷಕರು, ಊರವರು, ಶಿಕ್ಷಕರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

Suddi Udaya

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

Suddi Udaya

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

Suddi Udaya

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

Suddi Udaya

ಪಡ್ಡಂದಡ್ಕ: ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಶುಭಾರಂಭ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!