ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರು ಸೇರಿದಂತೆ ಕರ್ನಾಟಕ ರಾಜ್ಯದ ಉಡುಪಿ, ಉತ್ತರಕನ್ನಡ, ಚಾಮರಾಜನಗರದಿಂದ ಒಟ್ಟು 35 ಮಂದಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ ದೊರಕಿದ್ದು, ದೆಹಲಿಗೆ ತೆರಳಲಿದ್ದಾರೆ.

ಇವರಲ್ಲಿ ಆದಿವಾಸಿ ಮಹಿಳೆ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಲಕ್ಷ್ಮಿರವರಿಗೆ ದೆಹಲಿಯ ವಿಮಾನವೇರುವ ಭಾಗ್ಯ ಒದಗಿಬಂದಿದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಯೋಜನೆ ಇದಾಗಿದ್ದು, ಸಂಜೀವಿನಿ’- ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಮಾರ್ಗದರ್ಶನದಲ್ಲಿ ಅನುಷ್ಠಾನಗೊಳ್ಳಲಿದೆ. ಮಾ.1 ರಂದು ರಾಷ್ಟ್ರಪತಿಗಳ ಭೇಟಿ ಹಾಗೂ ಅಮೃತ್ ಉದ್ಯಾನವನಕ್ಕೆ ಭೇಟಿ ನೀಡಲು ಅವಕಾಶ ದೊರೆಯಲಿದೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಲಕ್ಷ್ಮಿ ಅವರು ನಿಸರ್ಗ ಸ್ವಸಹಾಯ ಗುಂಪಿನ ಸದಸ್ಯೆಯಾಗಿದ್ದು, ತ್ರಿವೇಣಿ ಸಂಜೀವಿನಿ ಒಕ್ಕೂಟದ ಸದಸ್ಯೆ. ತನ್ನ ತಾಯಿ ತಯಾರಿಸುವ ಬುಟ್ಟಿ ಸಹಿತ ಕರಕುಶಲ ಸಾಮಗ್ರಿಗಳನ್ನು ಮಾರಾಟ ಮಾಡುವ ಕಾಯಕ ಮಾಡುತ್ತಿದ್ದಾರೆ.

Leave a Comment

error: Content is protected !!