April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ

ಬೆಳ್ತಂಗಡಿ : ಬಳ್ಳಾಲರಾಯನ ದುರ್ಗ ಹಾಗೂ ಭಂಡಾಜೆ ಫಾಲ್ಸ್ ಚರಣಕ್ಕೆ ಬಂದು ನಾಪತ್ತೆಯಾಗಿದ್ದ, ಯುವಕನನ್ನು ಮೂಡಿಗೆರೆ ಪೊಲೀಸರು ಹಾಗೂ ಸ್ಥಳೀಯರು ರಾತ್ರಿ ಕಾಡಿನಲ್ಲಿ ಹುಡುಕಾಡಿ ಪತ್ತೆ ಹಚ್ಚಿದ ಪ್ರಕರಣ ವರದಿಯಾಗಿದೆ.


ಮಂಗಳೂರಿನ ಖಾಸಗಿ ಸಂಸ್ಥೆಯ 10 ಮಂದಿ ವೈದ್ಯಕೀಯ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿಗಳು ಭಂಡಾಜೆ ಫಾಲ್ಸ್ ಮತ್ತು ಬಳ್ಳಾಲರಾಯನ ದುರ್ಗ ನೋಡಲು ಬಂದಿದ್ದವರು ಕಾಡಿನ ಮಧ್ಯೆ ತಂಡದಲ್ಲಿದ್ದ ಧನುಷ್ ಎಂಬ ವಿದ್ಯಾರ್ಥಿ ನಾಪತ್ತೆಯಾಗಿದ್ದ ಆತನ ಮೊಬೈಲ್ ಕೂಡಾ ಸ್ವಿಚ್‌ಆಫ್ ಆಗಿತ್ತು. ಇದರಿಂದ ತೀವ್ರ ಗೊಂದಲ ಹಾಗೂ ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು ಹುಡುಕಾಡಿ ನಂತರ ಸುಂಕಸಾಲೆ ಎಂಬ ಗ್ರಾಮಕ್ಕೆ ಬಂದು ತಂಡದಲ್ಲಿದ್ದ ಆದಿತ್ಯ ಎಂಬ ಯುವ 112 ಪೊಲೀಸ್ ವಾಹನಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದ ರಾತ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ವಿಚಾರಿಸಿ, ಹುಡುಕಾಟ ನಡೆಸಿದಾಗ ತಡ ರಾತ್ರಿ ದಟ್ಟವಾದ ಅರಣ್ಯದಲ್ಲಿ ತಪ್ಪಿಸಿಕೊಂಡಿದ್ದ ಯುವಕ ಧನುಷ್ ಒಬ್ಬನೇ ನಿಂತಿರುವುದು ಕಂಡು ಬಂದಿದ್ದು, ಆತನನ್ನು ರಕ್ಷಿಸಿ, ಧೈರ್ಯ ತುಂಬಿ, ಕರೆ ತಂದು ಆತನ ಪೋಷಕರಿಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳ ತಂಡವನ್ನು ವಾಹನದಲ್ಲಿ ಕೊಟ್ಟಿಗೆಹಾರಕ್ಕೆ ಕರೆತಂದು ನಂತರ ಮಂಗಳೂರಿಗೆ ಕಳುಹಿಸಿಕೊಟ್ಟಿರುವುದಾಗಿ ವರದಿಯಾಗಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮೆಹಬೂಬ್ ಸಾಧನಿ ಶಂಕರ್ ಬೋವಿ ಹಾಗೂ ಸ್ಥಳೀಯರು ಇದ್ದರು.

Related posts

ರೆಖ್ಯ: 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ಮತ್ತು ಎಮ್. ತುಂಗಪ್ಪ ಗೌಡರಿಗೆ ಶ್ರದ್ಧಾಂಜಲಿ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya
error: Content is protected !!